Monday, 12th May 2025

ಭೀಕರ ಅಪಘಾತ: ಮಿಸ್ ಸೌತ್ ಇಂಡಿಯಾ, ಮಾಜಿ ಮಿಸ್ ಕೇರಳ ಸಾವು

ಕೊಚ್ಚಿ: ಕೊಚ್ಚಿಯ ವೈಟ್ಟಿಲ್ಲಾದಲ್ಲಿ ಸೋಮವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಿಸ್ ಸೌತ್ ಇಂಡಿಯಾ ಹಾಗೂ ಮಾಜಿ ಮಿಸ್ ಕೇರಳ ಆನ್ಸಿ ಕಬೀರ್ ಹಾಗೂ ಮಾಜಿ ಮಿಸ್ ಕೇರಳ ರನ್ನರ್ ಅಪ್ ಅಂಜನಾ ಶಾಜನ್ ಮೃತ ಪಟ್ಟಿದ್ದಾರೆ.

ವೈಟಿಲ್ಲಾ ಮತ್ತು ಪಲರಿವಟ್ಟಂ ನಡುವಿನ ರಾ.ಹೆದ್ದಾರಿಯಲ್ಲಿ ಹಾಲಿಡೇ ಇನ್ ಹೋಟೆಲ್ ಬಳಿ ಅಪಘಾತ ಸಂಭವಿಸಿದೆ.

ಆನ್ಸಿ ಮತ್ತು ಅಂಜನಾ ಪ್ರಯಾಣಿಸುತ್ತಿದ್ದ ಕಾರು ವೈಟ್ಟಿಲ್ಲಾ ಕಡೆಯಿಂದ ಬರುತ್ತಿರುವಾಗ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಮರಕ್ಕೆ ಡಿಕ್ಕಿ ಹೊಡೆದಿದೆ. ಆನ್ಸಿ ಮತ್ತು ಅಂಜನಾ ಜೊತೆ ತ್ರಿಶೂರ್ ಅಬ್ದುಲ್ ರೆಹ ಮಾನ್ ಮತ್ತು ಮುಹಮ್ಮದ್ ಆಸಿಫ್ ಕೂಡ ಕಾರಿನಲ್ಲಿದ್ದರು. ಗಂಭೀರವಾಗಿ ಗಾಯ ಗೊಂಡ ಇಬ್ಬರನ್ನೂ ಎರ್ನಾಕುಲಂ ಮೆಡಿಕಲ್ ಸೆಂಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆನ್ಸಿ ಮತ್ತು ಅಂಜನಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಆನ್ಸಿ ತಿರುವನಂತಪುರಂ ಜಿಲ್ಲೆಯ ಅಲಂಕೋಡ್ ಮೂಲದವರಾಗಿದ್ದು, ಅಂಜನಾ ತ್ರಿಶೂರ್ ಮೂಲದವರಾಗಿದ್ದಾರೆ.

ಕಾರು ಅತಿ ವೇಗದಲ್ಲಿ ಚಲಿಸುತ್ತಿದ್ದ ವೇಳೆ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವು ದನ್ನು ತಪ್ಪಿಸಲು ಹೋಗಿ ಅಪಘಾತ ಸಂಭವಿಸಿರಬಹುದು ಎಂದು ಪೋಲಿಸರು ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *