Monday, 12th May 2025

ಅವಧಿಪೂರ್ವ ಲೋಕಸಭೆ ಚುನಾವಣೆ: ಎಂ.ಕೆ.ಸ್ಟಾಲಿನ್ ಸುಳಿವು

ಚೆನ್ನೈ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸೋಲುಂಡಿರುವ ಬಿಜೆಪಿ ಮುಂದಿನ ಲೋಕಸಭೆ ಚುನಾವಣೆ ಯನ್ನು ಅವಧಿಪೂರ್ವ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ.

2014 ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಕಳೆದ ಒಂಬತ್ತು ವರ್ಷಗಳಲ್ಲಿ ತಮಿಳುನಾಡಿಗೆ ಬಿಜೆಪಿ ಏನು ಮಾಡಿದೆ ಎಂದು ಗೃಹಸಚಿವ ಅಮಿತ್‌ ಶಾ ಅವರನ್ನು ಉಲ್ಲೇಖಿಸಿ ಪ್ರಶ್ನಿಸಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಒಂಬತ್ತು ವರ್ಷ ಪೂರ್ಣಾವಾಗುತ್ತಿರುವ ಹಿನ್ನೆಲೆಯಲ್ಲಿ ಅಮಿತ್‌ ಶಾ ತಮಿಳುನಾಡು ಪ್ರವಾಸ ದಲ್ಲಿದ್ದಾರೆ.

ಈ ನಡುವೆ, ಲೋಕಸಭೆ ಚುನಾವಣೆಗೆ ಸಿದ್ಧರಾಗಿರಿ ಎಂದು ಡಿಎಂಕೆ ಕಾರ್ಯಕರ್ತರಿಗೆ ಕರೆ ನೀಡಿದ ಸ್ಟಾಲಿನ್, ಯಾವುದೇ ರಾಜಕೀಯ ಪಕ್ಷವು ಡಿಎಂಕೆ ಯನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

2024 ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನ ಎಲ್ಲಾ ಸ್ಥಾನಗಳನ್ನು ಗೆಲ್ಲಲು ಶ್ರಮಿಸಬೇಕು ಎಂದು ಪಕ್ಷದ ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ. ಎಐಎಡಿಎಂಕೆ ಜೊತೆಗಿನ ರಾಜಕೀಯ ಮೈತ್ರಿ ಹೊಂದಿರುವ ಬಿಜೆಪಿ ತಮಿಳುನಾಡಿನಲ್ಲಿ ಕನಿಷ್ಟ 11 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ.