Monday, 12th May 2025

ತಮಿಳುನಾಡು ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ನಿಷೇಧ

ಚೆನ್ನೈ: ತಮಿಳುನಾಡಿನಾದ್ಯಂತ ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ಬಳಸುವು ದನ್ನು ಮದ್ರಾಸ್ ಹೈಕೋರ್ಟ್ ನಿಷೇಧಿಸಿದೆ.

ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧಿಸುವ ಕ್ರಮವು ಪೂಜಾ ಸ್ಥಳಗಳ ಶುದ್ಧತೆ ಮತ್ತು ಪಾವಿತ್ರ್ಯತೆ ಕಾಪಾಡು ವುದು ಎಂದು ನ್ಯಾಯಾಲಯ ಹೇಳಿದೆ.

ಜನರಿಗೆ ತೊಂದರೆಯಾಗದಂತೆ ದೇವಸ್ಥಾನಗಳಲ್ಲಿ ಫೋನ್ ಠೇವಣಿ ಲಾಕರ್‌ ಗಳನ್ನು ಸ್ಥಾಪಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ಸುಬ್ರಹ್ಮಣ್ಯ ಸ್ವಾಮಿ ದೇಗುಲದಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯ ಹಿನ್ನೆಲೆಯಲ್ಲಿ ಈ ಆದೇಶ ಹೊರಬಿದ್ದಿದೆ.

ಮೊಬೈಲ್ ಫೋನ್‌ಗಳು ಜನರ ಗಮನವನ್ನು ಬೇರೆಡೆ ಸೆಳೆಯುತ್ತವೆ ಮತ್ತು ದೇವತೆಗಳ ಚಿತ್ರಗಳನ್ನು ಕ್ಲಿಕ್ಕಿಸುವುದು ಆಗಮ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಅರ್ಜಿ ದಾರರು ವಾದಿಸಿದ್ದಾರೆ. ಜೊತೆಗೆ ಮಹಿಳೆಯರು ತಮ್ಮ ಒಪ್ಪಿಗೆಯಿಲ್ಲದೆ ತಮ್ಮ ಚಿತ್ರ ಗಳನ್ನು ಕ್ಲಿಕ್ ಮಾಡುವುದರಿಂದ ಭಯಪಡುತ್ತಾರೆ.