Sunday, 11th May 2025

ರವಿದಾಸ್ ವಿಶ್ರಾಮ್ ಧಾಮ ಮಂದಿರ’ದಲ್ಲಿ ಮೋದಿ ಪ್ರಾರ್ಥನೆ

#Modi

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ರವಿದಾಸ್ ಜಯಂತಿ ಹಿನ್ನೆಲೆಯಲ್ಲಿ ದೆಹಲಿಯ ಕರೋಲ್ ಬಾಗ್‌ನಲ್ಲಿರುವ ‘ಶ್ರೀ ಗುರು ರವಿದಾಸ್ ವಿಶ್ರಾಮ್ ಧಾಮ ಮಂದಿರ’ದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಹಿಂದೂ ಕ್ಯಾಲೆಂಡರ್ ಪ್ರಕಾರ ಮಾಘ ಮಾಸದ ಹುಣ್ಣಿಮೆಯ ದಿನವಾದ ಮಾಘ್ ಪೂರ್ಣಿಮೆಯಂದು ರವಿದಾಸ್ ಜಯಂತಿ ಆಚರಿಸಲಾಗುತ್ತದೆ.

ಮಂಗಳವಾರ ಪ್ರಧಾನಿ ಮೋದಿ ಅವರು, ಜಾತೀಯತೆ ಮತ್ತು ಅಸ್ಪೃಶ್ಯತೆಯಂತಹ ದುಷ್ಟ ಪದ್ಧತಿಗಳನ್ನು ತೊಡೆದುಹಾಕಲು ಅವರು ತಮ್ಮ ಜೀವನ ವನ್ನು ಮುಡಿಪಾಗಿಟ್ಟರು ಎಂದು ಹೇಳಿದರು. ದೇವಾಲಯದಲ್ಲಿ ಜನರ ಕಲ್ಯಾಣಕ್ಕಾಗಿ ಪ್ರಾರ್ಥನೆ ಮಾಡುವುದಾಗಿ ಪ್ರಧಾನಿ ಹೇಳಿದ್ದರು.

ತಮ್ಮ ಸರ್ಕಾರ ಪ್ರತಿಯೊಂದು ಹೆಜ್ಜೆ ಮತ್ತು ಯೋಜನೆಯಲ್ಲಿ ಗುರು ರವಿದಾಸ್ ಅವರ ಮನೋಭಾವವನ್ನು ಅಳವಡಿಸಿಕೊಂಡಿದೆ ಎಂದು ಹೇಳಿದರು.