Thursday, 15th May 2025

ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಿದ ಮೋದಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯಲ್ಲಿ 72ನೇ ಗಣರಾಜ್ಯೋತ್ಸವದ ದಿನದ ಅಂಗವಾಗಿ ಇಂಡಿಯಾ ಗೇಟ್ ಬಳಿಯಿರುವ ಅಮರ್ ಜವಾನ್ ಜ್ಯೋತಿಯಲ್ಲಿ ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಿದರು.

ಮೋದಿಯವರು ಅಮರ ಜವಾನ್ ಜ್ಯೋತಿಗೆ ನಮನ ಸಲ್ಲಿಸಿದ ಬಳಿಕ ರಾಷ್ಟ್ರಪತಿ ರಾಮನಾಥ್ ಕೋವಿದ್ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂದ್, ಮೂರು ಪಡೆಗಳ ರಕ್ಷಣಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಭಾರತೀಯ ಸೇನಾಪಡೆ ಮುಖ್ಯಸ್ಥ ಎಂಎಂ ನರವಾಣೆ, ನೌಕಾಪಡೆಯ ಮುಖ್ಯಸ್ಥ ಕರಂಬೀರ್ ಸಿಂಗ್ ಹಾಗೂ ಭಾರತೀಯ ವಾಯುಪಡೆಯ ಮಾರ್ಷಲ್ ಆರ್’ಕೆಎಸ್ ಭದೌರಿಯಾ ಅವರು ಹಾಜರಿದ್ದರು.

ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿದೇಶಿ ಅತಿಥಿ ಭಾಗಿಯಾಗ್ತಿಲ್ಲ. ಬಾಂಗ್ಲಾದೇಶ ವಿಮೋಚನೆಯ 50ನೇ ವರ್ಷದ ನೆನಪಿಗಾಗಿ ಈ ಬಾರಿಯ ಗಣರಾಜ್ಯೋತ್ಸವ ಪರೇಡ್​ನಲ್ಲಿ ಬಾಂಗ್ಲಾದೇಶದ ಸೇನಾ ತುಕಡಿ ಭಾಗಿಯಾಗಲಿದೆ.

ಪರೇಡ್ ವೀಕ್ಷಣೆಗೆ 1 ಲಕ್ಷ 25 ಸಾವಿರ ಜನರ ಬದಲು 25 ಸಾವಿರ ಮಂದಿಗೆ ಮಾತ್ರ ಅವಕಾಶ ನೀಡಿದ್ದಾರೆ. ರಾಜಪಥದಲ್ಲಿ ವಿವಿಧ ರಾಜ್ಯಗಳ 17 ಸ್ತಬ್ದಚಿತ್ರಗಳು ಸೇರಿ ಒಟ್ಟು 31 ಸ್ತಬ್ದಚಿತ್ರಗಳು ಪ್ರದರ್ಶನವಾಗಲಿದ್ದು, ಸ್ತಬ್ದಚಿತ್ರಗಳ ಜೊತೆ ಸಂಚರಿಸುವ ಕಲಾವಿದರ ಸಂಖ್ಯೆಯನ್ನೂ ಕಡಿಮೆ ಮಾಡಿದ್ದಾರೆ.

ಪರೇಡ್ ವೀಕ್ಷಣೆ ವೇಳೆ ಕೊರೊನಾ ಲಕ್ಷಣ ಕಂಡು ಬಂದರೆ, ಅಂತೋರು ವಿಶ್ರಾಂತಿ ಪಡೆಯೋಕೆ 8 ವಿಶ್ರಾಂತಿ ಬೂತ್​ಗಳ ವ್ಯವಸ್ಥೆ ಮಾಡಲಾಗಿದೆ. ಗಣರಾಜ್ಯೋತ್ಸವದ ಏರ್​ಶೋನಲ್ಲಿ ರಫೇಲ್ ಫೈಟರ್​ ಜೆಟ್​​ಗಳು ಭಾಗಿಯಾಗಲಿವೆ.

Leave a Reply

Your email address will not be published. Required fields are marked *