Monday, 12th May 2025

ಮೋದಿ ಭದ್ರತೆ ಲೋಪ ಪ್ರಕರಣ: ನಾಳೆ ವಿಚಾರಣೆ

ನವದೆಹಲಿ : ಇತ್ತೀಚೆಗೆ ಪಂಜಾಬ್’ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಯಲ್ಲಿ ಲೋಪ ದೋಷ ವಿಚಾರದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.

ಭದ್ರತೆಯಲ್ಲಿ ಲೋಪ ದೋಷದ ಬಗ್ಗೆ ದೇಶದಲ್ಲಿ ಭಾರೀ ಅಕ್ರೋಶ ವ್ಯಕ್ತವಾಗಿದ್ದು, ಪಂಜಾಬ್ ಸರ್ಕಾರದ ನಡೆಗೆ ಕೇಂದ್ರ ಸರ್ಕಾರ ಗರಂ ಆಗಿದೆ.

ಪಂಜಾಬ್ ನಲ್ಲಿ ಮೋದಿ ಅವರ ಭದ್ರತೆಯ ಉಲ್ಲಂಘನೆಯ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಮನವಿಯಲ್ಲಿ ಕೋರಲಾಗಿದೆ.

ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಮತ್ತು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಮೂವರು ನ್ಯಾಯಾಧೀಶರ ಪೀಠವು ವಿಚಾರಣೆ ನಡೆಸಲಿದೆ.

ಫಿರೋಜ್ ಪುರದಲ್ಲಿ ಪ್ರತಿಭಟನಾಕಾರರ ದಿಗ್ಬಂಧನದಿಂದಾಗಿ ಪ್ರಧಾನಿ ಅವರ ಬೆಂಗಾವಲು ಪಡೆ ಫ್ಲೈಓವರ್ ನಲ್ಲಿ ಸಿಲುಕಿಕೊಂಡಿತ್ತು, ನಂತರ ಅವರು ಕಾರ್ಯಕ್ರಮಗಳಲ್ಲಿ ಭಾಗವಹಿಸದೆ ಪಂಜಾಬ್ ನಿಂದ ಮರಳಿದ್ದರು.