Monday, 12th May 2025

ಜನತೆಗೆ ಹೋಳಿ ಹಬ್ಬದ ಶುಭ ಕೋರಿದ ಪ್ರಧಾನಿ ಮೋದಿ

ನವದೆಹಲಿ: ಹಬ್ಬವು ಜೀವನದಲ್ಲಿ ಸಂತೋಷದ ಪ್ರತಿಯೊಂದು ಬಣ್ಣವನ್ನು ತರಲಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ನಾಯಕರು ದೇಶದ ಜನರಿಗೆ ಹೋಳಿ ಹಬ್ಬದ ಶುಭಾಶಯ ಕೋರಿ ದ್ದಾರೆ.

ನಿಮ್ಮೆಲ್ಲ ರಿಗೂ ಹೋಳಿ ಹಬ್ಬದ ಶುಭಾಶಯಗಳು. ಪರಸ್ಪರ ಪ್ರೀತಿ, ವಾತ್ಸಲ್ಯ ಮತ್ತು ಸಹೋದರತ್ವದ ಸಂಕೇತವಾಗಿರುವ ಈ ಬಣ್ಣದ ಹಬ್ಬವು ನಿಮ್ಮ ಜೀವನದಲ್ಲಿ ಸಂತೋಷದ ಪ್ರತಿಯೊಂದು ಬಣ್ಣವನ್ನು ತರಲಿ’ ಎಂದು ಪ್ರಧಾನಿ ಮೋದಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.