Wednesday, 14th May 2025

ಹಣ ಅಕ್ರಮ ವರ್ಗಾವಣೆ ಪ್ರಕರಣ: ನ.9 ರಂದು ಆದೇಶ

ಮುಂಬೈ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಶಿವಸೇನಾ ಸಂಸದ ಸಂಜಯ್ ರಾವುತ್ ಸಲ್ಲಿಸಿರುವ ಜಾಮೀನು ಅರ್ಜಿಯ ತೀರ್ಪನ್ನು ವಿಶೇಷ ನ್ಯಾಯಾಲಯವು ಬುಧವಾರ ಕಾಯ್ದಿರಿಸಿದ್ದು, ನ.9 ರಂದು ಆದೇಶ ಪ್ರಕಟಿಸುವುದಾಗಿ ಹೇಳಿದೆ.
ರಾವುತ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನವೆಂಬರ್ 9ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ.
ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ)ಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಗೆ ನಿಯೋಜಿತವಾಗಿರುವ ವಿಶೇಷ ನ್ಯಾಯಾಧೀಶ ಎಂ.ಜಿ. ದೇಶಪಾಂಡೆ ಅವರು, ಪ್ರಕರಣದ ಸಹ-ಆರೋಪಿ ಪ್ರವೀಣ್ ರಾವುತ್ ಸಲ್ಲಿಸಿರುವ ಜಾಮೀನು ಅರ್ಜಿಯ ಬಗ್ಗೆ ನ.9 ರಂದು ಆದೇಶ ನೀಡುವುದಾಗಿ ಹೇಳಿದರು.