Tuesday, 13th May 2025

ಗೋಡೆ ಕುಸಿತ ದುರಂತ: ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಠಾಕ್ರೆ

ಮುಂಬೈ: ಶನಿವಾರ ತಡರಾತ್ರಿ ಮುಂಬೈನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಚೆಂಬೂರ್ ಹಾಗೂ ವಿಕ್ರೋಲಿಯ ದಲ್ಲಿ ಗೋಡೆ ಕುಸಿತದಿಂದ ಸಂಭವಿಸಿದ ದುರಂತಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭಾನುವಾರ ಸಂತಾಪ ಸೂಚಿಸಿ, ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ಗೋಡೆ ಕುಸಿತದಿಂದಾಗಿ 25 ಮಂದಿ ಮೃತಪಟ್ಟಿದ್ದು, ಭಾರಿ ಮಳೆಯಿಂದಾಗಿ ಮುಂಬೈ ನಗರದ ಹಲವು ಪ್ರದೇಶ ಗಳು ಜಲಾವೃತಗೊಂಡಿವೆ. ಹಲವೆಡೆ ಭೂಕುಸಿತ ಸಂಭವಿಸಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಲೋಕಲ್‌ ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಠಾಕ್ರೆ ಮುಂಬೈ ನಾಗರಿಕ ಆಯುಕ್ತರೊಂದಿಗೆ ಮಾತನಾಡಿ, ರಕ್ಷಣಾ ಮತ್ತು ಪರಿಹಾರ ಕಾರ್ಯಗಳ ಮಾಹಿತಿಯ ನ್ನು ಸಂಗ್ರಹಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ಪುರಸಭೆ ಕಾರ್ಮಿಕರು, ಅಗ್ನಿಶಾಮಕ ದಳ ಮತ್ತು ಪೊಲೀಸರೊಂದಿಗೆ ಸಂ‍ಪರ್ಕದಲ್ಲಿರುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಸಂತ್ರಸ್ತರ ಕುಟುಂಬಸ್ಥರಿಗೆ ತಲಾ ₹5 ಲಕ್ಷ ಪರಿಹಾರ ಮತ್ತು ಗಾಯಾಳುಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗು ವುದು ಎಂದು ತಿಳಿಸಿದೆ. ಭಾರಿ ಮಳೆಯಿಂದಾಗಿ ಜಂಬೊ ಕೋವಿಡ್-19 ಕೇಂದ್ರಗಳಲ್ಲಿ ವೈದ್ಯಕೀಯ ಸೌಲಭ್ಯಗಳ ಪೂರೈಕೆಗೆ ಪರಿಣಾಮ ಬೀರದಂತೆ ನೋಡಿಕೊಳ್ಳಬೇಕೆಂದು ಠಾಕ್ರೆ ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.

ವಾಹನ ಸಂಚಾರಕ್ಕೆ ರಸ್ತೆಗಳನ್ನು ತೆರವುಗೊಳಿಸಬೇಕು ಮತ್ತು ರೈಲು ಸೇವೆಯನ್ನು ಆದಷ್ಟು ಬೇಗ ಪುನರಾರಂಭಿಸಬೇಕು’ ಎಂದು ಅವರು ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

Leave a Reply

Your email address will not be published. Required fields are marked *