Monday, 12th May 2025

ಕೆಎಸ್ ಈಶ್ವರಪ್ಪಗೆ ನಡ್ಡಾ ಛೀಮಾರಿ

ನವದೆಹಲಿ: ಕೆಂಪುಕೋಟೆಯ ಮೇಲೆ ಕೇಸರಿ ಧ್ವಜ ಹಾರಿಸುವ ಹೇಳಿಕೆ ನೀಡಿ ಟೀಕೆಗೆ ತುತ್ತಾಗಿರುವ ಕರ್ನಾಟಕ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಛೀಮಾರಿ ಹಾಕಿದ್ದಾರೆ.

ಈಶ್ವರಪ್ಪ ಹೇಳಿಕೆ ಖಂಡಿಸಿ ಅವರನ್ನು ಸಂಪುಟದಿಂದಲೇ ವಜಾ ಮಾಡುವಂತೆ ಒತ್ತಾಯಿಸಿ ಉಭಯ ಸದನಗಳಲ್ಲೂ ಪ್ರತಿಪಕ್ಷ ಕಾಂಗ್ರೆಸ್ ಅಹೋರಾತ್ರಿ ಧರಣಿ ನಡೆಸುತ್ತಿರುವ ಬೆನ್ನಲ್ಲೆ ಈ ವಿಚಾರಕ್ಕೆ ಸಂಬಂಧಿಸಿದಂತೆ ನಡ್ಡಾ ಮೌನ ಮುರಿದು ಈಶ್ವರಪ್ಪರವರ ಹೇಳಿಕೆ ಒಪ್ಪುವಂತದ್ದಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಸಚಿವ ಈಶ್ವರಪ್ಪರವಿಗೆ ದೂರವಾಣಿ ಕರೆ ಮಾಡಿ ಛೀಮಾರಿ ಹಾಕಿದ್ದೇನೆ ಎಂದು ಹೇಳಿದರು. ಅಲ್ಲದೆ ಕರ್ನಾಟಕದಲ್ಲಿ ಹಿಜಾಬ್ ವಿವಾದವನ್ನು ಪ್ರತಿಪಕ್ಷ ಗಳೇ ಹೆಚ್ಚಿಸುತ್ತಿವೆ. ಬಿಜೆಪಿ ಅಭಿವೃದ್ಧಿ ಕಾರ್ಯಗಳನ್ನಿಟ್ಟುಕೊಂಡು ಚುನಾವಣೆಯಲ್ಲಿ ಹೋರಾಟ ಮಾಡುತ್ತಿದ್ದೇವೆ. ಆದರೆ, ಪ್ರತಿಪಕ್ಷಗಳು ಹಿಜಾಬ್ ವಿವಾದ ದೊಡ್ಡದು ಮಾಡುತ್ತಿವೆ ಎಂದು ವಾಗ್ದಾಳಿ ನಡೆಸಿದ್ದಾರೆ.