Wednesday, 14th May 2025

ಮತಎಣಿಕೆ: ನಾಗಾಲ್ಯಾಂಡ್’ನಲ್ಲಿ ಬಿಜೆಪಿ ಮೈತ್ರಿಕೂಟ ಭರ್ಜರಿ ಜಯಭೇರಿ

ವದೆಹಲಿ: ಈಶಾನ್ಯ ರಾಜ್ಯಗಳಾದ ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್ ನಲ್ಲಿ ಇತ್ತೀಚೆಗೆ ನಡೆದಿದ್ದ ವಿಧಾನಸಭಾ ಚುನಾವಣೆಯ ಮತಎಣಿಕೆ ಗುರುವಾರ ಆರಂಭಗೊಂಡಿದ್ದು, ಆರಂಭಿಕ ಹಂತದ ಮತ ಎಣಿಕೆಯಲ್ಲಿ ಈಶಾನ್ಯದ ನಾಗಾಲ್ಯಾಂಡ್ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಭರ್ಜರಿ ಜಯಭೇರಿ ಗಳಿಸಿದೆ.

ನಾಗಾಲ್ಯಾಂಡ್ ನಲ್ಲಿ ಬಿಜೆಪಿ ಮತ್ತು ನ್ಯಾಷನಲ್ ಡೆಮಾಕ್ರಟಿಕ್ ಪ್ರೊಗ್ರೇಸ್ಸೀವ್ ಪಾರ್ಟಿ(ಎನ್ ಡಿಪಿಪಿ) ನೇತೃತ್ವದ ಮೈತ್ರಿಕೂಟ 60 ಸದಸ್ಯಬಲದ ವಿಧಾನ ಸಭೆಯಲ್ಲಿ 42 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ನಾಗಾ ಪೀಪಲ್ಸ್ ಫ್ರಂಟ್ (ಎನ್ ಪಿಎಫ್) ನಾಲ್ಕು ಸ್ಥಾನಗಳಲ್ಲಿ ಹಾಗೂ ಕಾಂಗ್ರೆಸ್ ಕೇವಲ ಒಂದು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಬಿಜೆಪಿ ಮತ್ತು ಎನ್ ಡಿಪಿಪಿ ಮೈತ್ರಿಕೂಟದ ಸೀಟು ಹಂಚಿಕೆ ಒಪ್ಪಂದದ ಪ್ರಕಾರ, ಬಿಜೆಪಿ 20 ಸ್ಥಾನಗಳಲ್ಲಿ ಹಾಗೂ ಎನ್ ಡಿಪಿಪಿ 40 ಸ್ಥಾನಗಳಲ್ಲಿ ಸ್ಪರ್ಧಿಸಿತ್ತು.

ನಾಗಾಲ್ಯಾಂಡ್ ನಲ್ಲಿ 2003ರವರೆಗೂ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಆ ಬಳಿಕ ನಾಗಾಲ್ಯಾಂಡ್ ವಿಧಾನಸಭೆಯಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಒಂದು ಸ್ಥಾನದಲ್ಲಿಯೂ ಗೆಲುವು ಸಾಧಿಸಿಲ್ಲವಾಗಿತ್ತು.