Tuesday, 13th May 2025

ಪ್ರಧಾನಿ ಮೋದಿ ಅಸ್ಸಾಂಗೆ ಏ.14 ರಂದು ಭೇಟಿ

ವದೆಹಲಿ: ಏ.14 ರಂದು ಪ್ರಧಾನಿ ಮೋದಿಯವರು ಅಸ್ಸಾಂಗೆ ಭೇಟಿ ನೀಡಲಿದ್ದಾರೆ.

ಈ ವೇಳೆ ಸುಮಾರು 3400 ಕೋಟಿ ಮೌಲ್ಯದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಅಥವಾ ಚಾಲನೆ ಮಾಡಲಿದ್ದಾರೆ.

ಅಸ್ಸಾಂನಲ್ಲಿ ಮೋದಿಯವರು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ, ಗುವಾಹಟಿ ಮತ್ತು ರಾಜ್ಯದ ಇತರ ಮೂರು ವೈದ್ಯಕೀಯ ಕಾಲೇಜುಗಳನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ ಎಂದು ಕಚೇರಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಗುವಾಹಟಿಯ ಏಮ್ಸ್‌ ಅಸ್ಸಾಂ ರಾಜ್ಯ ಮತ್ತು ಇಡೀ ಈಶಾನ್ಯ ಪ್ರದೇಶದ ಜನರಿಗೆ ಹೆಚ್ಚು ಅನುಕೂಲಕರವಾಗಲಿದೆ.ಇದನ್ನು ಬರೋಬ್ಬರಿ 1120 ಕೋಟಿ ರ.ಗಳ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಈ ಏಮ್ಸ್ ಆಸ್ಪತ್ರೆಯು ಸುಮಾರು 30 ಆಯುಷ್ ಹಾಸಿಗೆಗಳು ಸೇರಿದಂತೆ 750 ಹಾಸಿಗೆಗಳ ಸಾಮರ್ಥ್ಯವನ್ನು ಹೊಂದಿರುವ ಅತ್ಯಾಧುನಿಕ ಆಸ್ಪತ್ರೆಯಾಗಿದೆ. ಆಸ್ಪತ್ರೆಯು ಈಶಾನ್ಯ ಭಾಗದ ಜನರಿಗೆ ವಿಶ್ವ ದರ್ಜೆಯ ಆರೋಗ್ಯ ಸೌಲಭ್ಯಗಳನ್ನು ಒದಗಿಸುತ್ತದೆ.

ಇದೇ ಸಮಯದಲ್ಲಿ ಸುಮಾರು 1,800 ಕೋಟಿ ವೆಚ್ಚರಲ್ಲಿ ನಿರ್ಮಾಣಗೊಂಡಿರುವ ಮೂರು ವೈದ್ಯಕೀಯ ಕಾಲೇಜುಗಳನ್ನು ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

ನಂತರ ಗುವಾಹಟಿಯ ಶ್ರೀಮಂತ ಶಂಕರದೇವ್ ಕಲಾಕ್ಷೇತ್ರದಲ್ಲಿ ಗುವಾಹಟಿ ಹೈಕೋರ್ಟ್‌ನ ಪ್ಲಾಟಿನಂ ಜುಬಿಲಿ ಆಚರಣೆ ಯನ್ನು ಗುರುತಿಸುವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಗವಹಿಸಲಿದ್ದಾರೆ.