Sunday, 11th May 2025

2020, 2021ನೇ ಸಾಲಿನ ‘ನಾರಿ ಶಕ್ತಿ ಪುರಸ್ಕಾರ’ ಪ್ರದಾನ ಇಂದು

ನವದೆಹಲಿ: ಮಹಿಳಾ ದಿನಾಚರಣೆ ಪ್ರಯುಕ್ತ ಮಾರ್ಚ್ 8ರಂದು ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ವಿಶೇಷ ಸಮಾರಂಭ ಆಯೋಜಿಸಲಾಗಿದ್ದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಸಾಧಕ ಮಹಿಳೆಯರಿಗೆ 2020 ಮತ್ತು 2021ನೇ ಸಾಲಿನ ‘ನಾರಿ ಶಕ್ತಿ ಪುರಸ್ಕಾರ’ ಪ್ರದಾನ ಮಾಡಲಿದ್ದಾರೆ.

ಕೋವಿಡ್-19 ಸೃಷ್ಟಿಸಿರುವ ಪ್ರಸ್ತುತ ಪರಿಸ್ಥಿತಿಯಿಂದಾಗಿ 2020ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭವನ್ನು 2021ರಲ್ಲಿ ನಡೆಸಲು ಸಾಧ್ಯವಾಗಲಿಲ್ಲ. ಹೀಗಾಗಿ 2020 ಮತ್ತು 2021ನೇ ಸಾಲಿನ ‘ನಾರಿ ಶಕ್ತಿ ಪುರಸ್ಕಾರ’ ಪ್ರದಾನ ಮಾಡ ಲಾಗುತ್ತಿದೆ.

ಆಜಾದಿ ಕಾ ಅಮೃತ ಮಹೋತ್ಸವದ ಭಾಗವಾಗಿ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ವಾರಪೂರ್ತಿ ಕಾರ್ಯಕ್ರಮಗಳು 2022 ಮಾರ್ಚ್ 1ರಿಂದ ದೆಹಲಿ ಯಲ್ಲಿ ಆರಂಭವಾಗಿವೆ.

ಮಹಿಳಾ ಸಬಲೀಕರಣಕ್ಕೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ಮತ್ತಷ್ಟು ಕೆಲಸ ಮಾಡುವಂತೆ ಪ್ರೇರೇಪಿಸಲು ಮತ್ತು ಉತ್ತಮ ಸಾಧನೆ ಮಾಡುವಂತೆ ಜನಸಾಮಾನ್ಯರನ್ನು ಪ್ರೇರೇಪಿ ಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದ ನಡೆಸಲಿದ್ದಾರೆ.

28 ಪ್ರಶಸ್ತಿಗಳನ್ನು (2020 ಮತ್ತು 2021ನೇ ಸಾಲಿನಲ್ಲಿ ತಲಾ 14 ಪ್ರಶಸ್ತಿಗಳು) 29 ವ್ಯಕ್ತಿಗಳಿಗೆ, ವಿಶೇಷವಾಗಿ ದುರ್ಬಲ ಮತ್ತು ನಿರ್ಲಕ್ಷಿತ ಮಹಿಳೆಯರ ಸಬಲೀಕರಣಕ್ಕಾಗಿ ವಿಶಿಷ್ಟ ಸೇವೆ ಸಲ್ಲಿಸಿರುವ ಸಾಧಕರ ಅಸಾಧಾರಣ ಕೆಲಸ ಗುರುತಿಸಿ, ಈ ಪ್ರತಿಷ್ಠಿತ ಪ್ರಶಸ್ತಿ ನೀಡಲಾಗುತ್ತಿದೆ.