Tuesday, 13th May 2025

ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಬಿಹಾರ : NEET ಪರೀಕ್ಷೆಗಾಗಿ ಸಿದ್ದತೆ ಮಾಡಿಕೊಳ್ಳುತ್ತಿದ್ದ ವಿದ್ಯಾರ್ಥಿಯೊರ್ವ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಮೃತರನ್ನು ಶೆಂಬುಲ್ ಪರ್ವೀನ್ ಎಂದು ಗುರುತಿಸಲಾಗಿದೆ.

ಮೃತರು ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯವರಾಗಿದ್ದು, ಕಳೆದ ವರ್ಷ ಜೂನ್‌ನಲ್ಲಿ ಕೋಟಾ ಕ್ಕೆ ಬಂದು ನೀಟ್ ಸಿದ್ಧತೆಗಾಗಿ ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ದಾಖಲಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆಕೆಯ ಕೊಠಡಿಯಿಂದ ಯಾವುದೇ ಸೂಸೈಡ್ ನೋಟ್ ಪತ್ತೆಯಾಗದ ಕಾರಣ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿ ದ್ದಾರೆ. ಆದರೆ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ್ದಕ್ಕೆ ಬಾಲಕಿ ಬೇಸರಗೊಂಡಿದ್ದಾಳೆ ಎಂದು ಬಾಲಕಿಯ ಮನೆಯವರು ಹೇಳಿದ್ದಾರೆ.

ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಸರ್ಕಲ್ ಇನ್ಸ್‌ಪೆಕ್ಟರ್ (ದಾದಬಾರಿ) ರಾಜೇಶ್ ಪಾಠಕ್ ಮಾತನಾಡಿ, ಕಳೆದ ಎರಡೂವರೆ ತಿಂಗಳಲ್ಲಿ ಕೋಟಾದಲ್ಲಿ ಇಂತಹ ಐದು ಘಟನೆ ನಡೆದಿದೆ.

2022 ರಲ್ಲಿ ನಗರದಲ್ಲಿ NEET ಆಕಾಂಕ್ಷಿಗಳು ಸೇರಿದಂತೆ ಕನಿಷ್ಠ 15 ಕೋಚಿಂಗ್ ಇನ್ಸ್ಟಿಟ್ಯೂಟ್ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡರು ಎಂದು ತಿಳಿಸಿದ್ದಾರೆ.