Wednesday, 14th May 2025

ಜಮ್ಮು: ನೂತನ ಭಾರತೀಯ ತಾಂತ್ರಿಕ ಸಂಸ್ಥೆ ಕ್ಯಾಂಪಸ್ ಉದ್ಘಾಟನೆ

ಜಮ್ಮು: ಭಾನುವಾರ ಜಮ್ಮುವಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ನೂತನ ಭಾರತೀಯ ತಾಂತ್ರಿಕ ಸಂಸ್ಥೆ ಕ್ಯಾಂಪಸ್ ನ್ನು ಉದ್ಘಾಟಿಸಿ ದರು.

ಅಮಿತ್ ಶಾ ಅವರೊಂದಿಗೆ ಕೇಂದ್ರ ಸಚಿವರಾದ ಜೀತೇಂದ್ರ ಸಿಂಗ್, ಧರ್ಮೇಂದ್ರ ಪ್ರಧಾನ್ ಹಾಗೂ ಜಮ್ಮು-ಕಾಶ್ಮೀರದ ಉಪ ರಾಜ್ಯಪಾಲ ಮನೋಜ್ ಸಿನ್ಹಾ ಮತ್ತಿತರರು ಉಪಸ್ಥಿತರಿದ್ದರು.

ಸುಮಾರು 210 ಕೋಟಿ ರೂ. ವೆಚ್ಚದಲ್ಲಿ ನೂತನ ಜಮ್ಮು ಐಐಟಿ ಕ್ಯಾಂಪಸ್ ನ್ನು ನಿರ್ಮಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಜೊತೆಗೆ ಹಾಸ್ಟೆಲ್, ಜಿಮ್ನಾಸಿಮ್, ಒಳಾಂಗಣ ಕ್ರೀಡೆಗಳು ಮತ್ತಿತರ ಸೌಲಭ್ಯಗಳಿರುವುದಾಗಿ ತಿಳಿದುಬಂದಿದೆ. ಕ್ಯಾಂಪಸ್ ಉದ್ಘಾಟನೆ ನಂತರ ಅಮಿತ್ ಶಾ, ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲು ಭಗವತಿ ನಗರಕ್ಕೆ ತೆರಳಿದರು.

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದುಪಡಿಸಿ ಕೇಂದ್ರಾಡಳಿತ ಪ್ರದೇಶವಾಗಿ ವಿಭಜಿಸಿದ ನಂತರ ಇದೇ ಮೊದಲ ಬಾರಿಗೆ ಅಮಿತ್ ಶಾ ಮೂರು ದಿನಗಳ ಕಾಲ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ.

 

Leave a Reply

Your email address will not be published. Required fields are marked *