Saturday, 10th May 2025

ಶಸ್ತ್ರಾಸ್ತ್ರ ಪರವಾನಗಿ ಪಡೆದ ನೂಪುರ್ ಶರ್ಮಾ

ನವದೆಹಲಿ: ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರು ಆತ್ಮರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಗಿ ಪಡೆದಿದ್ದಾರೆ ಎಂದು ವರದಿಯಾಗಿದೆ.

ಬಿಜೆಪಿ ರಾಷ್ಟ್ರೀಯ ವಕ್ತಾರೆಯಾಗಿದ್ದ ನೂಪುರ್‌ ಶರ್ಮ, ವಾಹಿನಿಯೊಂದರಲ್ಲಿ ನಡೆದ ಚರ್ಚಾ ಕಾರ್ಯಕ್ರಮದಲ್ಲಿ ಪ್ರವಾದಿ ಪೈಗಂಬರ್‌ ಕುರಿತಾಗಿ ನೀಡಿದ್ದ ಹೇಳಿಕೆ ವಿವಾದ ಸೃಷ್ಟಿಸಿತ್ತು.

ಬಳಿಕ ದೇಶಾದ್ಯಂತ ಭಾರೀ ಪ್ರತಿಭಟನೆಯೂ ನಡೆದಿತ್ತು. ಅಲ್ಲದೇ ಹಲವು ರಾಜ್ಯಗಳಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಈ ಬೆನ್ನಲ್ಲೇ ಬಿಜೆಪಿ ಕೂಡಾ ಇವರನ್ನು ಪಕ್ಷದಿಂದ ಹೊರಹಾಕುವ ನಿರ್ಧಾರ ಮಾಡಿತ್ತು.

ನೂಪುರ್‌ ಶರ್ಮ ವಿರುದ್ಧ ಈಗಾಗಲೇ ಹಲವು ರಾಜ್ಯಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ಪ್ರಸ್ತುತ ಸುಪ್ರೀಂ ಕೋರ್ಟ್‌ ಈ ಎಲ್ಲಾ ಪ್ರಕರಣಗಳನ್ನು ದೆಹಲಿ ಹೈಕೋರ್ಟ್‌ ನಲ್ಲಿಯೇ ವಿಚಾರಣೆ ನಡೆಸುವುದಾಗಿ ಹೇಳಿದೆ.

ಹಲವು ರಾಷ್ಟ್ರಗಳು ನೂಪೂರ್‌ ಶರ್ಮಾ ನೀಡಿದ್ದ ಹೇಳಿಕೆಯನ್ನು ಖಂಡಿಸಿದ್ದವು. ವಿವಾದ ಉಲ್ಬಣಗೊಂಡ ನಂತರ ನೂಪುರ್ ಕ್ಷಮೆಯಾಚಿಸಿದ್ದಾರೆ ಎನ್ನಲಾಗಿದೆ.