Tuesday, 13th May 2025

ಒಡಿಶಾ ಆರೋಗ್ಯ ಸಚಿವರ ಮೇಲೆ ಗುಂಡಿನ ದಾಳಿ

ಭುವನೇಶ್ವರ: ಒಡಿಶಾ ರಾಜ್ಯದ ಆರೋಗ್ಯ ಸಚಿವ ನಬ ಕಿಶೋರ್ ದಾಸ್ ಮೇಲೆ ಗುಂಡಿನ ದಾಳಿಯಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.
ಒಡಿಶಾದ ಝಾರಸುಗುಡ ಜಿಲ್ಲೆಯ ಬ್ರಜರಾಜನಗರ್​ನ ಗಾಂಧಿ ಚಕ ಎಂಬಲ್ಲಿ ಭಾನುವಾರ ಮಧ್ಯಾಹ್ನ ಘಟನೆ ಸಂಭವಿಸಿದೆ. ಪೊಲೀಸ್ ಅಧಿಕಾರಿ ಎಎಸ್​ಐ ಗೋಪಾಲ್ ಚಂದ್ರ ದಾಸ್ ಅವರು ಸಚಿವರ ಎದೆಗೆ ಗುಂಡು ಹಾರಿಸಿದ್ದಾರೆ ಎಂದು ಹೇಳಲಾಗಿದೆ.ಬಿಜು ಪಾಟ್ನಾಯಕ್ ನೇತೃತ್ವದ ಬಿಜೆಡಿ ಸರ್ಕಾರದಲ್ಲಿ ಪ್ರಬಲ ಸಚಿವರಲ್ಲೊಬ್ಬರಾಗಿರುವ ನಬ ದಾಸ್ ಅವರು ಕಾರ್ಯಕ್ರಮ ವೊಂದರಲ್ಲಿ ಪಾಲ್ಗೊಳ್ಳಲು ಕಾರಿನಿಂದ ಕೆಳಗಿಳಿಯುವಾಗ ಈ ದಾಳಿ ನಡೆದಿದೆ. ನಬ ದಾಸ್ ಅವರ ಎದೆಗೆ ಎರಡು ಗುಂಡುಗಳು ಹೊಕ್ಕಿವೆ.

ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಝಾರಸುಗುಡ ಆಸ್ಪತ್ರೆಗೆ ದಾಖಲಿಸ ಲಾಗಿದೆ. ಪೂರ್ವಯೋಜಿತ ಕೃತ್ಯ ನವ್ ಕಿಶೋರ್ ದಾಸ್ ಮೇಲೆ ನಡೆದ ದಾಳಿಯು ಪೂರ್ವಯೋಜಿತ ಕೃತ್ಯ ಎಂದು ಶಂಕಿಸಲಾಗಿದೆ.

ಆದರೆ, ಯಾವ ಕಾರಣಕ್ಕಾಗಿ ಇವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ ಎಂಬುದು ತಿಳಿದು ಬಂದಿಲ್ಲ. ನಬ್ ದಾಸ್ ಮೇಲೆ ಆರೋಪಿಯು ನಾಲ್ಕೈದು ಸುತ್ತು ಗುಂಡಿನ ದಾಳಿ ಮಾಡಿದ್ದಾನೆ. ಎರಡು ಗುಂಡಗಳು ಎದೆಗೆ ಹೊಕ್ಕಿವೆ. ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.