Wednesday, 14th May 2025

ಲಷ್ಕರ್-ಎ-ತೊಯ್ಬಾ ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು – ಕಾಶ್ಮೀರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾದ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ.

ಶ್ರೀನಗರದ ಹೊರವಲಯದಲ್ಲಿ ಖಾನ್‌ಮೋಹ್ ನಲ್ಲಿ ಸರಪಂಚ್ ಸಮೀರ್ ಅಹ್ಮದ್ ಭಟ್ ಅವರನ್ನು ಗುಂಡಿಕ್ಕಿ ಕೊಂದ ಒಂದು ದಿನದ ನಂತರ ಪುಲ್ವಾಮಾದಲ್ಲಿ ಎನ್‌ಕೌಂಟರ್ ನಡೆದಿದೆ.

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ನೈನಾ ಬಟ್ಪೋರಾ ಗ್ರಾಮದಲ್ಲಿ ಎನ್‌ಕೌಂಟರ್ ಆರಂಭಗೊಂಡಿದ್ದು, ಪೊಲೀಸರು, ಸೇನೆ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆಗಳ ಜಂಟಿ ಪಡೆಗಳು ಉಗ್ರರ ವಿರುದ್ಧ ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆ ಪ್ರಾರಂಭಿಸಿದ ನಂತರ ಎನ್ ಕೌಂಟರ್ ನಡೆದಿದೆ.

ಭದ್ರತಾ ಪಡೆಗಳು ಹತ್ತಿರ ಬರುತ್ತಿದ್ದಂತೆ ಅಡಗಿಕೊಂಡಿದ್ದ ಉಗ್ರರು ಗುಂಡಿನ ದಾಳಿ ನಡೆಸಿ ಎನ್‌ಕೌಂಟರ್‌ಗೆ ಕಾರಣರಾದರು. ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಹತ್ಯೆಯಾದ ಇಬ್ಬರೂ ಲಷ್ಕರ್-ಎ-ತೊಯ್ಬಾದೊಂದಿಗೆ ಸಂಬಂಧ ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.