Wednesday, 14th May 2025

ಅಫ್ಘಾನಿಸ್ತಾನದಿಂದ ಭಾರತೀಯರ ಸ್ಥಳಾಂತರ ಕಾರ್ಯಾಚರಣೆಯೇ ‘ಆಪರೇಷನ್ ದೇವಿ ಶಕ್ತಿ’

ನವದೆಹಲಿ: ತಾಲಿಬಾನ್ ಅತಿಕ್ರಮಣಕ್ಕೆ ಒಳಗಾಗಿರುವ ಅಫ್ಘಾನಿಸ್ತಾನದ ಕಾಬೂಲ್‌ನಿಂದ ತನ್ನ ನಾಗರಿಕರನ್ನು ಸ್ಥಳಾಂತರಿಸುವ ಭಾರತದ ಕಾರ್ಯಾಚರಣೆಗೆ ‘ಆಪರೇಷನ್ ದೇವಿ ಶಕ್ತಿ’ ಎಂದು ಹೆಸರಿಸಲಾಗಿದೆ.

ಮಂಗಳವಾರ ಅಫ್ಗನ್‌ನ ತನ್ನ 78 ಪ್ರಜೆಗಳನ್ನು ತಜಕಿಸ್ತಾನದ ರಾಜಧಾನಿ ದುಶಾಂಬೆಯಿಂದ ಕರೆ ತಂದಿತು. ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಟ್ವೀಟರ್‌ನಲ್ಲಿ ಈ ವಿಚಾರವನ್ನು ಹಂಚಿಕೊಂಡಿದ್ದು, ಈ ಕಾರ್ಯಾಚರಣೆಗೆ ‘ಆಪರೇಷನ್ ದೇವಿ ಶಕ್ತಿ’ ಎಂಬ ಹೆಸರಿಟ್ಟಿರುವುದಾಗಿ ತಿಳಿಸಿದ್ದಾರೆ.

ಕಾಬೂಲ್‌ನಿಂದ ಸ್ಥಳಾಂತರಗೊಳ್ಳುವ 78 ಮಂದಿ ದುಶಾಂಬೆ ಮೂಲಕ ಆಗಮಿಸಿದ್ದಾರೆ. ಆ. 16ರಂದು ಕಾಬೂಲ್‌ನಿಂದ ದೆಹಲಿಗೆ 40 ಭಾರತೀಯರನ್ನು ಏರ್‌ ಲಿಫ್ಟ್ ಮಾಡುವ ಮೂಲಕ ಭಾರತವು ಸ್ಥಳಾಂತರ ಕಾರ್ಯಾಚರಣೆ ಆರಂಭಿಸಿತು. ಕಾಬೂಲ್‌ನಲ್ಲಿ ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿಯ ನಡುವೆ ಭಾರತವು 800ಕ್ಕೂ ಹೆಚ್ಚು ಜನರನ್ನು ಅಲ್ಲಿಂದ ಸ್ಥಳಾಂತರಿಸಿದೆ.

Leave a Reply

Your email address will not be published. Required fields are marked *