Sunday, 11th May 2025

PM Modi : ಮಹಾರಾಷ್ಟ್ರದಲ್ಲಿ 7,600 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

PM Narendra Modi

ನವದೆಹಲಿ: ಮಹಾರಾಷ್ಟ್ರದಲ್ಲಿ (Maharastra) 7,600 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಬುಧವಾರ ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು. ನಾಗ್ಪುರದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೇಲ್ದರ್ಜೆಗೇರಿಸುವ ಮತ್ತು ಶಿರಡಿ ವಿಮಾನ ನಿಲ್ದಾಣದಲ್ಲಿ (Shiradi Airport) ಹೊಸ ಟರ್ಮಿನಲ್ ಕಟ್ಟಡಕ್ಕೂ ಅವರು ಶಂಕುಸ್ಥಾಪನೆ ನೆರವೇರಿಸಿದರು.

ಮಹಾರಾಷ್ಟ್ರದಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸ್ಕಿಲ್ಸ್ ಮುಂಬೈ ಮತ್ತು ವಿದ್ಯಾ ಸಮಿಕ್ಷಾ ಕೇಂದ್ರವನ್ನು ಪ್ರಧಾನಿ ಉದ್ಘಾಟಿಸಿದರು. ರಾಜ್ಯದಲ್ಲಿ 10 ಹೊಸ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಪ್ರಾರಂಭಿಸಿದರು. ನಾಗ್ಪುರದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಒಟ್ಟು ಅಂದಾಜು 7,000 ಕೋಟಿ ರೂ.ಗಳ ಯೋಜನಾ ವೆಚ್ಚದೊಂದಿಗೆ ಮಾಡಲಾಗುವುದು ಎಂದು ಅಧಿಕಾರಿಗಳು ಇದೇ ವೇಳೆ ತಿಳಿಸಿದ್ದಾರೆ.

ಅನೇಕ ಕ್ಷೇತ್ರಗಳ ಬೆಳವಣಿಗೆ

ಇದು ಉತ್ಪಾದನೆ, ವಾಯುಯಾನ, ಪ್ರವಾಸೋದ್ಯಮ, ಲಾಜಿಸ್ಟಿಕ್ಸ್ ಮತ್ತು ಆರೋಗ್ಯ ರಕ್ಷಣೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಬೆಳವಣಿಗೆಗೆ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ. ಇದು ನಾಗ್ಪುರ ನಗರ ಮತ್ತು ವಿಶಾಲ ವಿದರ್ಭ ಪ್ರದೇಶಕ್ಕೆ ಪ್ರಯೋಜನವನ್ನು ನೀಡುತ್ತದೆ. 645 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವ ಶಿರಡಿ ವಿಮಾನ ನಿಲ್ದಾಣದಲ್ಲಿ ಹೊಸ ಸಮಗ್ರ ಟರ್ಮಿನಲ್ ಕಟ್ಟಡವು ಶಿರಡಿಗೆ ಬರುವ ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯಗಳನ್ನು ಒದಗಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈ, ನಾಸಿಕ್, ಜಲ್ನಾ, ಅಮರಾವತಿ, ಗಡ್ಚಿರೋಲಿ, ಬುಲ್ಧಾನಾ, ವಾಶಿಮ್, ಭಂಡಾರ, ಹಿಂಗೋಲಿ ಮತ್ತು ಅಂಬರ್ನಾಥ್ (ಥಾಣೆ) ನಲ್ಲಿ 10 ಹೊಸ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಪ್ರಧಾನಿ ಬುಧವಾರ ಪ್ರಾರಂಭಿಸಿದರು.

ಇದನ್ನೂ ಓದಿ: ಇಂದಿನಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕಿಗೆ ಆರ್‌ಬಿಐ ನಿಷೇಧ

ಅತ್ಯಾಧುನಿಕ ತಂತ್ರಜ್ಞಾನ ಮತ್ತು ತರಬೇತಿಯೊಂದಿಗೆ ಉದ್ಯಮಕ್ಕೆ ಸಿದ್ಧವಾದ ಕಾರ್ಯಪಡೆಯನ್ನು ರಚಿಸುವ ಉದ್ದೇಶದಿಂದ ಮುಂಬೈನ ಇಂಡಿಯನ್ ಇನ್‌ಸ್ಟಿಟ್ಯೂಟ್‌ ಆಫ್ ಸ್ಕಿಲ್ಸ್ (ಐಐಎಸ್) ಸ್ಥಾಪಿಸಲಾಗಿದೆ. ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ ಸ್ಥಾಪಿಸಲಾದ ಇದು ಟಾಟಾ ಎಜುಕೇಶನ್ ಆಂಡ್ ಡೆವಲಪ್ಮೆಂಟ್ ಟ್ರಸ್ಟ್ ಮತ್ತು ಭಾರತ ಸರ್ಕಾರದ ನಡುವಿನ ಸಹಯೋಗವಾಗಿದೆ.

ಮೆಕಾಟ್ರಾನಿಕ್ಸ್, ಕೃತಕ ಬುದ್ಧಿಮತ್ತೆ, ಡೇಟಾ ಅನಾಲಿಟಿಕ್ಸ್, ಇಂಡಸ್ಟ್ರಿಯಲ್ ಆಟೋಮೇಷನ್ ಮತ್ತು ರೊಬೊಟಿಕ್ಸ್ ನಂತಹ ವಿಶೇಷ ಕ್ಷೇತ್ರಗಳಲ್ಲಿ ತರಬೇತಿ ನೀಡಲು ಸಂಸ್ಥೆ ಯೋಜಿಸಿದೆ.