Tuesday, 13th May 2025

ದೇಶದ ಜನತೆಗೆ ದೀಪಾವಳಿ ಹಬ್ಬದ ಶುಭ ಕೋರಿದ ಪ್ರಧಾನಿ, ರಾಷ್ಟ್ರಪತಿ, ಉಪರಾಷ್ಟ್ರಪತಿ

ನವದೆಹಲಿ: ದೀಪಾವಳಿ ಪ್ರಯುಕ್ತ ರಾಷ್ಟ್ರಪತಿ ರಾಮನಾಥ ಕೋವಿಂದ್, ಉಪ ರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ದೇಶದ ಜನರಿಗೆ ಶುಭ ಕೋರಿದ್ದಾರೆ.

ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇ ಗೌಡರು ಮತ್ತು ಡಾ. ಮನಮೋಹನ್ ಸಿಂಗ್, ಕೇಂದ್ರ ಸಚಿವರಾದ ಅಮಿತ್ ಶಾ, ರಾಜ ನಾಥ್ ಸಿಂಗ್, ನಿರ್ಮಲಾ ಸೀತಾರಾಮನ್, ಸ್ಮತಿಇರಾನಿ, ಡಿ.ವಿ.ಸದಾನಂದಗೌಡ, ಪ್ರಹ್ಲಾದ್‍ಜೋಷಿ, ಡಾ.ಹರ್ಷವರ್ಧನ್, ಪಿಯೂಷ್‍ ಗೋಯೆಲ್, ಪ್ರಕಾಶ್‍ಜಾವ್ಡೇಕರ್, ಕಾಂಗ್ರೆಸ್ ಅಧ್ಯಕ್ಷ ಸೋನಿಯಾಗಾಂಧಿ, ಪಕ್ಷದ ಮುಖಂಡರಾದ ರಾಹುಲ್‍ಗಾಂಧಿ, ಮಲ್ಲಿಕಾರ್ಜುನಖರ್ಗೆ, ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗೌರ್ನರ್‍ಗಳು ಮತ್ತು ಮುಖ್ಯಮಂತ್ರಿಗಳು ಹಾಗೂ ವಿವಿಧ ಪಕ್ಷಗಳ ಮುಖಂಡರು ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಬೆಳಕಿನ ಹಬ್ಬ ದೀಪಾವಳಿ ಎಲ್ಲರ ಜೀವನದಲ್ಲಿ ಬೆಳಕು ಮತ್ತು ಸಂತಸ ನೀಡಲಿ ಎಂದು ಹಾರೈಸಿದ್ದಾರೆ.

ವಿಶ್ವದ ಅನೇಕ ಗಣ್ಯರು ಭಾರತೀಯರಿಗೆ ಮತ್ತು ವಿದೇಶಗಳಲ್ಲಿ ನೆಲೆಸಿರುವ ಭಾರತೀಯ ಸಂಜಾತರಿಗೆ ಶುಭಕೋರಿದ್ದಾರೆ.

Leave a Reply

Your email address will not be published. Required fields are marked *