Wednesday, 14th May 2025

ನ್ಯಾಯಾಂಗ ಬಂಧನಕ್ಕೆ ಅಫ್ತಾಬ್‌ ಅಮೀನ್‌ ಪೂನಾವಾಲಾ

ವದೆಹಲಿ: ತನ್ನ ಸಹಜೀವನ ಸಂಗಾತಿ ಶ್ರದ್ಧಾ ವಾಲಕರ್‌ ಕೊಲೆ ಪ್ರಕರಣದ ಆರೋಪಿ ಅಫ್ತಾಬ್‌ ಅಮೀನ್‌ ಪೂನಾವಾಲಾ ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕೊಲೆ ವಿಚಾರಣೆ ಇನ್ನೂ ಪೂರ್ಣಗೊಂಡಿಲ್ಲ ಎಂದು ದೆಹಲಿ ಪೊಲೀಸರು ಆರೋಪಿಯ ಕಸ್ಟಡಿ ಅವಧಿ ವಿಸ್ತರಣೆಗೆ ಮನವಿ ಮಾಡುವ ಸಾಧ್ಯತೆ ಇದೆ ಎಂದು ಈ ಮೊದಲು ವರದಿ ಯಾಗಿತ್ತು.

ದಕ್ಷಿಣ ದೆಹಲಿಯ ಮಹ್ರೌಲಿಯ ತನ್ನ ಫ್ಲ್ಯಾಟ್‌ನಲ್ಲಿ ಆಫ್ತಾಬ್‌ ಅಮೀನ್‌ ಪೂನಾವಾಲಾ ಕಳೆದ ಮೇನಲ್ಲಿ ಶ್ರದ್ಧಾ ಅವರನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದ. ನಂತರ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ, 300 ಲೀಟರ್ ಸಾಮರ್ಥ್ಯದ ಫ್ರಿಜ್‌ನಲ್ಲಿ ಸುಮಾರು ಮೂರು ವಾರಗಳವರೆಗೆ ಇರಿಸಿದ್ದ. ನಂತರ ಅವುಗಳನ್ನು ನಗರದ ವಿವಿಧೆಡೆ ಮತ್ತು ಛತರ್‌ ಪುರ ಸಮೀಪದ ಅರಣ್ಯ ಪ್ರದೇಶದಲ್ಲಿ ಹಲವು ದಿನಗಳವರೆಗೆ ಒಂದೊಂದಾಗಿ ಬಿಸಾಡಿದ್ದ.

‘ಸಿಟ್ಟಿನ ಭರದಲ್ಲಿ ಅಪರಾಧ ಎಸಗಿದೆ’ ಎಂದು ಪೂನಾವಾಲ ಈಗಾಗಲೇ ಒಪ್ಪಿಕೊಂಡಿ ದ್ದಾನೆ.