Wednesday, 14th May 2025

ಪ್ರಮೋದ್ ಸಾವಂತ್ ಪ್ರಮಾಣ ವಚನ ಸ್ವೀಕಾರ ಇಂದು

ಗೋವಾ: ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಸೋಮವಾರ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ಮೂರು ಬಾರಿಯ ಶಾಸಕ ಪ್ರಮೋದ್ ಸಾವಂತ್ ಎರಡನೇ ಬಾರಿಗೆ ಗೋವಾ ಮುಖ್ಯಮಂತ್ರಿಯಾಗುತ್ತಿದ್ದಾರೆ. ಸೋಮವಾರ ಪಣಜಿ ಸಮೀಪದ ಬಾಂಬೋಲಿಂ ಶಾಮ ಪ್ರಸಾದ್ ಮುಖರ್ಜಿ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ರಾಜ್ಯಪಾಲ ಪಿ. ಎಸ್. ಶ್ರೀಧರನ್ ಪಿಳ್ಳೈ ಪ್ರಮೋದ್ ಸಾವಂತ್‌ಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಫೆಬ್ರವರಿ 14ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಜಯಗಳಿಸಿ ಅತಿ ದೊಡ್ಡ ಪಕ್ಷವಾಗಿತ್ತು. ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಮೂವರು ಪಕ್ಷೇ ತರ ಶಾಸಕರು, ಎಂಜಿಪಿಯ ಇಬ್ಬರು ಶಾಸಕರು ಬಿಜೆಪಿ ಬೆಂಬಲಿಸಿದ್ದು, ಅವರ ನೆರವಿನಿಂದ ಬಿಜೆಪಿ ಸರ್ಕಾರ ರಚನೆ ಮಾಡುತ್ತಿದೆ.