Sunday, 11th May 2025

ಇಂದು ಪುಟ್ಟಪರ್ತಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಪುಟ್ಟಪರ್ತಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಬುಧವಾರ ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಪುಟ್ಟಪರ್ತಿಗೆ ರಾಷ್ಟ್ರಪತಿ ಬರಲಿದ್ದಾರೆ.

ಸತ್ಯಸಾಯಿ ಡೀಮ್ಡ್ ವಿಶ್ವವಿದ್ಯಾಲಯದ 42ನೇ ಪದವಿ ಪ್ರದಾನ ಸಮಾರಂಭ ನಡೆಯಲಿದ್ದು, ದ್ರೌಪದಿ ಮುರ್ಮು ಮುಖ್ಯ ಅತಿಥಿಯಾಗಿ ಭಾಗವಹಿಸುವರು. 14 ವಿದ್ಯಾರ್ಥಿಗಳಿಗೆ ಡಾಕ್ಟರೇಟ್ ಮತ್ತು 21 ವಿದ್ಯಾರ್ಥಿಗಳಿಗೆ ಚಿನ್ನದ ಪದಕಗಳನ್ನು ನೀಡಲಾಗುವುದು.

ಒಡಿಶಾದಿಂದ ಮಧ್ಯಾಹ್ನ ಪುಟ್ಟಪರ್ತಿ ಸತ್ಯಸಾಯಿ ವಿಮಾನ ನಿಲ್ದಾಣ ತಲುಪಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಪ್ರಶಾಂತಿ ನಿಲಯಂ ತಲುಪಿ, 3.05ಕ್ಕೆ ಸಾಯಿ ಕುಲವಂತ ಮಂದಿರದಲ್ಲಿರುವ ಸತ್ಯಸಾಯಿ ಮಹಾಸಮಾಧಿಗೆ ಭೇಟಿ ನೀಡಿ. ಬಳಿಕ ಸತ್ಯಸಾಯಿ ಇನ್‌ಸ್ಟಿಟ್ಯೂಟ್ ಆಫ್ ಹೈಯರ್ ಲರ್ನಿಂಗ್‌ನ 42ನೇ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸುವರು.

ಮಧ್ಯಾಹ್ನ 3.35ಕ್ಕೆ ಪದವಿ ಪ್ರದಾನ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಡಾಕ್ಟರೇಟ್ ಹಾಗೂ ಚಿನ್ನದ ಪದಕ ಪ್ರದಾನ ಮಾಡಲಾಗುವುದು. ರಾಷ್ಟ್ರಪತಿ ದ್ರೌಪದಿ ಮುರ್ಮು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಸಂಜೆ ರಸ್ತೆ ಮೂಲಕ ಸತ್ಯಸಾಯಿ ವಿಮಾನ ನಿಲ್ದಾಣ ತಲುಪಿ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿದ್ದಾರೆ.

ರಾಷ್ಟ್ರಪತಿ ಹಾಗೂ ರಾಜ್ಯಪಾಲರ ಭೇಟಿ ಹಿನ್ನೆಲೆಯಲ್ಲಿ ಅಧಿಕಾರಿಗಳು ಭಾರೀ ಬಂದೋಬಸ್ತ್ ಮಾಡಿದ್ದು, 2000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

Leave a Reply

Your email address will not be published. Required fields are marked *