Sunday, 11th May 2025

ಸಿಬಿಎಸ್‌ಇ ಪರೀಕ್ಷೆ ರದ್ದು ಮಾಡಿ: ಸಚಿವ ನಿಶಾಂಕ್‌ರಿಗೆ ಪ್ರಿಯಾಂಕಾ ಪತ್ರ

ನವದೆಹಲಿ: ಸಿಬಿಎಸ್‌ಇ ಮಂಡಳಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರಿಗೆ ಪತ್ರ ಬರೆದಿದ್ದಾರೆ.

ಕೊರೋನಾ ರೋಗ ಉಲ್ಬಣವಾಗುತ್ತಿರುವ ಸಮಯದಲ್ಲಿ ಮಕ್ಕಳಿಗೆ ಪರೀಕ್ಷೆ ನಡೆಸಿದರೆ ತೊಂದರೆಗೊಳಗಾಗುವ ಸಾಧ್ಯತೆ ಇದೆ. ಪರೀಕ್ಷಾ ಕೇಂದ್ರದಲ್ಲಿ ಮಕ್ಕಳು ಸೇರುವುದರಿಂದ ಸೋಂಕಿಗೆ ಒಳಗಾಗುವ ತಾಣವಾಗಲಿದೆ. ಇದಕ್ಕೆ ಸರ್ಕಾರ ಮತ್ತು ಸಿಬಿಎಸ್‌ಇ ಮಂಡಳಿ ಜವಾಬ್ದಾರರಾಗಿರುತ್ತದೆ ಎಂದು ಹೇಳಿದ್ದಾರೆ.

COVID-19 ರ ಎರಡನೇ ಅಲೆ ಆತಂಕದಿಂದ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಗಳಿಗೆ ಬರಲು ಲಕ್ಷಾಂತರ ಮಕ್ಕಳು ಮತ್ತು ಪೋಷಕರು ಭಯ ಮತ್ತು ಆತಂಕ ವ್ಯಕ್ತಪಡಿಸಿದ್ದಾರೆ. ಕಾಯಿಲೆಯ ಭೀತಿಯಡಿಯಲ್ಲಿ ಪರೀಕ್ಷೆಗಳನ್ನು ನಡೆಸುವುದರಿಂದ ಮಕ್ಕಳ ಸಾಮರ್ಥ್ಯದ ಮೇಲೂ ಪರಿಣಾಮ ಬೀರುತ್ತದೆ ಎಂದು ತಿಳಿಸಿದ್ದು, ಪರೀಕ್ಷೆಗಳನ್ನು ರದ್ದುಗೊಳಿಸಬೇಕೆಂದು ವಿನಂತಿಸಿದ್ದಾರೆ.

ಅಪಾಯಕಾರಿ ಪರಿಸ್ಥಿತಿಗೆ ಮಕ್ಕಳನ್ನು ನೂಕುವ ಬದಲು, ಇಂತಹ ಸಮಯದಲ್ಲಿ ಅವರಿಗೆ ಬೆಂಬಲ, ಪ್ರೋತ್ಸಾಹ ಮತ್ತು ರಕ್ಷಣೆ ನೀಡಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily

Leave a Reply

Your email address will not be published. Required fields are marked *