Sunday, 11th May 2025

ರಾಜ್ಯಸಭಾ ಸದಸ್ಯರಾಗಿ ಅಥ್ಲೀಟ್ ಪಿ.ಟಿ.ಉಷಾ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಮಾಜಿ ಒಲಿಂಪಿಕ್ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಪಿಟಿ ಉಷಾ ಅವರು ಬುಧವಾರ ರಾಜ್ಯಸಭಾ ಸದಸ್ಯರಾಗಿ ಸಂವಿಧಾನದ ನಿಷ್ಠೆಯ ಪ್ರಮಾಣ ವಚನ ಸ್ವೀಕರಿಸಿದರು.

ಸಂಯೋಜಕ ಇಳಯರಾಜ, ಚಿತ್ರಕಥೆಗಾರ ವಿ ವಿಜಯೇಂದ್ರ ಪ್ರಸಾದ್ ಮತ್ತು ಆಧ್ಯಾತ್ಮಿಕ ನಾಯಕ ವೀರೇಂದ್ರ ಹೆಗ್ಗಡೆ ಅವರೊಂದಿಗೆ ಉಷಾ ಅವರನ್ನು ಸರ್ಕಾರವು ಸಂಸತ್ತಿನ ಮೇಲ್ಮನೆಗೆ ನಾಮನಿರ್ದೇಶನ ಮಾಡಿದ್ದು, ದಕ್ಷಿಣ ಭಾರತಕ್ಕೆ ಆಡಳಿತಾ ರೂಢ ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಭಾವದ ಭಾಗವಾಗಿ ಕಂಡುಬಂದಿದೆ.

ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಒಂದು ಸಣ್ಣ ಹಳ್ಳಿಯಲ್ಲಿ ಜನಿಸಿದ ಉಷಾ ಭಾರತದ ಅಪ್ರತಿಮ ಕ್ರೀಡಾ ಪಟುಗಳಲ್ಲಿ ಒಬ್ಬರು.