Monday, 12th May 2025

ಪುದುಚೇರಿಯಲ್ಲಿ ಮಾಸ್ಕ್ ಬಳಕೆ ಕಡ್ಡಾಯ

ಪುದುಚೇರಿ: ಕೋವಿಡ್ ಸತತವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರಾಡಳಿತವು ಪುದುಚೇರಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಬಳಕೆಯನ್ನು ಶುಕ್ರವಾರದಿಂದ ಕಡ್ಡಾಯಗೊಳಿಸಿದೆ.

ಮುಂದಿನ ದಿನಗಳಲ್ಲಿ ಕೋವಿಡ್ ಹೆಚ್ಚಳವಾಗುವ ಅಪಾಯವನ್ನು ಕಡಿಮೆ ಮಾಡಲು ತಕ್ಷಣದಿಂದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಿದೆ’ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

‘ಕೋವಿಡ್‌ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ರಸ್ತೆ, ಕಡಲ ಬದಿ, ಥಿಯೇಟರ್, ಆಫೀಸು, ನಿಲ್ದಾಣ ಮತ್ತು ಕಚೇರಿ ಮುಂತಾದ ಸಾರ್ವಜನಿಕ ಸ್ಥಳಗಳಲ್ಲಿ ಸರ್ಕಾರಿ ನೌಕರ ರಿಂದ ಹಿಡಿದು ಎಲ್ಲರೂ ಮಾಸ್ಕ್ ಧರಿಸತಕ್ಕದ್ದು. ದೈಹಿಕ ಅಂತರ ಕಾಪಾಡಿಕೊಂಡು ಸ್ವಚ್ಛ ವಾಗಿರತಕ್ಕದ್ದು’ ಎಂದು ಆದೇಶಿಸಿದರು.

ಪುದುಚೇರಿಯಲ್ಲಿ ಪ್ರಸ್ತುತ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 206ಕ್ಕೆ ಏರಿಕೆಯಾಗಿದೆ.