Sunday, 18th May 2025

ಪುಣೆಯಲ್ಲಿ ಮೆಟ್ರೋ ರೈಲಿಗೆ ಚಾಲನೆ, ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ

ಪುಣೆ : ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಪುಣೆಯಲ್ಲಿ ಮೆಟ್ರೋ ರೈಲಿಗೆ ಚಾಲನೆ ನೀಡಿ ದ್ದಾರೆ.

ನಗರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಪ್ರತಿಮೆಯನ್ನು ಅನಾವರಣ ಮಾಡಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಇಂದು ಪುಣೆಯ ಅಭಿವೃದ್ಧಿಗೆ ಸಂಬಂಧಿಸಿದ ಅನೇಕ ಯೋಜನೆಗಳನ್ನು ಉದ್ಘಾಟಿಸಲಾಗಿದೆ ಮತ್ತು ಶಿಲಾನ್ಯಾಸವನ್ನೂ ಮಾಡಲಾಗಿದೆ.

ಪುಣೆ ಮೆಟ್ರೋದ ಶಂಕುಸ್ಥಾಪನೆಗೆ ನನ್ನನ್ನು ಕರೆದಿದ್ದ ನೀವು ಈಗ ಅದನ್ನು ಉದ್ಘಾಟನೆ ಮಾಡುವ ಅವಕಾಶವನ್ನು ನೀಡಿರುವುದು ನನ್ನ ಸೌಭಾಗ್ಯ. ನಿಗದಿತ ಸಮಯದಲ್ಲಿ ಯೋಜನೆಗಳನ್ನು ಪೂರ್ಣಗೊಳಿಸಬಹುದು ಎಂಬ ಸಂದೇಶವೂ ಇದರಲ್ಲಿದೆ ಎಂದರು.

ಛತ್ರಪತಿ ಶಿವಾಜಿ ಮಹಾರಾಜರ ಭವ್ಯವಾದ ಪ್ರತಿಮೆಯನ್ನು ಉದ್ಘಾಟಿಸುವ ಸೌಭಾಗ್ಯ ನನಗೆ ಸಿಕ್ಕಿತು. ನಮ್ಮೆಲ್ಲರ ಹೃದಯದಲ್ಲಿ ಸದಾ ನೆಲೆಸಿರುವ ಛತ್ರಪತಿ ಶಿವಾಜಿ ಮಹಾರಾಜರ ಈ ಪ್ರತಿಮೆಯು ಯುವ ಪೀಳಿಗೆಯಲ್ಲಿ, ಮುಂದಿನ ಪೀಳಿಗೆಯಲ್ಲಿ ದೇಶಭಕ್ತಿಯ ಸ್ಫೂರ್ತಿಯನ್ನು ಜಾಗೃತಗೊಳಿಸುತ್ತದೆ ಎಂದರು.