Sunday, 11th May 2025

ದೇವಾಲಯದ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಮರಣದಂಡನೆ ಶಿಕ್ಷೆ

ವದೆಹಲಿ: ಉತ್ತರ ಪ್ರದೇಶದ ಗೋರಖ್ಪುರದ ಗೋರಖ್ನಾಥ್ ದೇವಾಲಯದಲ್ಲಿ ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮುರ್ತಾಜಾ ಅಬ್ಬಾಸಿ ಎಂಬ ವ್ಯಕ್ತಿಗೆ ವಿಶೇಷ ಎನ್‌ಐಎ ನ್ಯಾಯಾಲಯ ಸೋಮವಾರ ಮರಣದಂಡನೆ ವಿಧಿಸಿದೆ.

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT) ಪದವೀಧರ ಅಹ್ಮದ್ ಮುರ್ತಾಜಾ ಅಬ್ಬಾಸಿ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ.

ಕಳೆದ ವರ್ಷ ಏಪ್ರಿಲ್ 3 ರಂದು ಅಬ್ಬಾಸಿ ಗೋರಖ್ ನಾಥ್ ದೇವಾಲಯದ ಆವರಣಕ್ಕೆ ಬಲವಂತವಾಗಿ ಪ್ರವೇಶಿಸಲು ಪ್ರಯತ್ನಿಸಿದನು. ಅಲ್ಲಿ ನಿಯೋಜಿಸಲಾದ ಭದ್ರತಾ ಸಿಬ್ಬಂದಿಯ ಮೇಲೆ ಕುಡಗೋಲಿನಿಂದ ಹಲ್ಲೆ ನಡೆಸಿದನು, ಇಬ್ಬರು ಪ್ರಾಂತೀಯ ಸಶಸ್ತ್ರ ಪೊಲೀಸ್ (PAC) ಕಾನ್ ಸ್ಟೆಬಲ್ ಗಳು ಗಾಯಗೊಂಡಿದ್ದರು.