Tuesday, 13th May 2025

ಎಲಿಜಬೆತ್ 2 ನಿಧನ: ಸೆ.11 ರಂದು ಶೋಕಾಚರಣೆ

ವದೆಹಲಿ: ಬ್ರಿಟನ್ ರಾಣಿ ಎಲಿಜಬೆತ್ 2 ಅವರ ನಿಧನದ ಹಿನ್ನೆಲೆಯಲ್ಲಿ ಸೆ.11 ರಂದು ಭಾರತದಾದ್ಯಂತ ಒಂದು ದಿನದ ಶೋಕಾಚರಣೆ ನಡೆಸಲು ಭಾರತ ಸರ್ಕಾರ ನಿರ್ಧರಿಸಿದೆ.

‘ಹರ್ ಮೆಜೆಸ್ಟಿ ಕ್ವೀನ್ ಎಲಿಜಬೆತ್ II, ಯುನೈಟೆಡ್ ಕಿಂಗ್ಡಮ್ ಆಫ್ ಗ್ರೇಟ್ ಬ್ರಿಟನ್ ಮತ್ತು ನಾರ್ದರ್ನ್ ಐರ್ಲೆಂಡ್ 2022 ರ ಸೆ.8 ರಂದು ನಿಧನರಾದರು.

ಅಗಲಿದ ಗಣ್ಯರಿಗೆ ಗೌರವ ಸೂಚಕವಾಗಿ, ಭಾರತ ಸರ್ಕಾರವು ಸೆ.11 ರಂದು ಭಾರತ ದಾದ್ಯಂತ ಒಂದು ದಿನದ ರಾಜ್ಯ ಶೋಕಾಚರಣೆ ನಡೆಸಲು ನಿರ್ಧರಿಸಿದೆ ಎನ್ನಲಾಗಿದೆ.

‘ಶೋಕಾಚರಣೆ ದಿನದಂದು, ರಾಷ್ಟ್ರಧ್ವಜವನ್ನು ನಿಯಮಿತವಾಗಿ ಹಾರಿಸುವ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು ಮತ್ತು ಆ ದಿನದಂದು ಯಾವುದೇ ಅಧಿಕೃತ ಮನರಂಜನೆ ಇರುವುದಿಲ್ಲ’ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.