Saturday, 10th May 2025

ಬಾವಿಯಲ್ಲಿ ಸಿಲುಕಿದ್ದ ಬಾಲಕಿ ರಕ್ಷಣೆ: ಚಿಕಿತ್ಸೆ ಫಲಿಸದೆ ಸಾವು

ರಾಜಗಢ(ಮಧ್ಯಪ್ರದೇಶ): 25 ಅಡಿ ಆಳದ ಕೊಳವೆ ಬಾವಿಯೊಳಗೆ ಸಿಲುಕಿಕೊಂಡಿದ್ದ ನಾಲ್ಕು ವರ್ಷದ ಬಾಲಕಿ ರಕ್ಷಿಸಿದ ಕೆಲವೇ ಗಂಟೆಗಳಲ್ಲಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

ಪಿಪ್ಲಿಯಾ ರಸೋಡಾ ಗ್ರಾಮದ ಬಾಲಕಿ ಮಹಿ ಮಂಗಳವಾರ ಸಂಜೆ ಕೊಳವೆ ಬಾವಿಗೆ ಬಿದ್ದಿದ್ದಳು. ತಕ್ಷಣ ಕಾರ್ಯಪ್ರವೃತ್ತರಾದ ರಕ್ಷಣಾ ಸಿಬ್ಬಂದಿ ತಡ ರಾತ್ರಿ 2.30 ಸುಮಾರಿಗೆ ಬಾಲಕಿಯನ್ನು ಸುರಕ್ಷಿತವಾಗಿ ರಕ್ಷಿಸಿ ಪಚೋರ್‌ನಲ್ಲಿರುವ ಸರ್ಕಾರಿ ಆಸ್ಪತ್ರೆಗೆ ಸೇರಿದ್ದರು.

ಬಾಲಕಿಯ ಸ್ಥಿತಿ ಗಂಭೀರವಾಗಿದ್ದರಿಂದ ಪಚೋರ್‌ನಿಂದ ಭೋಪಾಲ್‌ನ ಹಮಿಡಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದಾಳೆ ಎಂದು ಆರೋಗ್ಯ ಅಧಿಕಾರಿ ಡಾ.ಕಿರಣ್ ವಾಡಿಯಾ ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ನಂತರ ಬಾಲಕಿಯ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *