Sunday, 11th May 2025

ಮುಂಬೈನಲ್ಲಿ 125 ಮಿ.ಮೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂಬೈ: ಸತತ ಮೂರನೇ ದಿನವೂ ನಗರದಲ್ಲಿ ಮಳೆಯ ಅಬ್ಬರ ಮುಂದು ವರೆದಿದೆ. ಈಗಾಗಲೇ 125 ಮಿ.ಮೀ ಮಳೆಯಾಗಿದೆ. ಇನ್ನೂ ಮಳೆ ಜಾಸ್ತಿಯಾ ಗುವ ಸಾಧ್ಯತೆ ಇದೆ.

ಹೀಗಾಗಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ. ಭಾರಿ ಮಳೆಯಾಗುತ್ತಿದ್ದು, ಹಲವಾರು ಪ್ರದೇಶಗಳು ಜಲಾವೃತಗೊಂಡಿದ್ದು, ನಗರದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವುದರಿಂದ, ತಾಪಮಾನವು 30 ಡಿಗ್ರಿ ಸೆಲ್ಸಿಯಸ್ ಗಿಂತ ಕಡಿಮೆಯಿದೆ.

ಮುಂಬೈ, ಥಾಣೆ, ಪಾಲ್ಘರ್ ಮತ್ತು ರಾಯಗಢದಲ್ಲಿ ಶುಕ್ರವಾರ ಮಳೆಗಾಗಿ ಐಎಂಡಿ ರೆಡ್ ಅಲರ್ಟ್ ನೀಡಿದ್ದು, ಕೆಲವು ಸ್ಥಳಗಳಲ್ಲಿ ಭಾರೀ ಮಳೆ ಮತ್ತು ಪ್ರತ್ಯೇಕ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹೇಳಿದ್ದಾರೆ.