Monday, 12th May 2025

ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಟ್ಯಾಬ್ಲೋಗೆ ಅವಕಾಶ

ವದೆಹಲಿ: ಜನವರಿ 26ರ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಟ್ಯಾಬ್ಲೋಗೆ ಅವಕಾಶ ನೀಡಲಾಗಿದೆ.

ಅಂತಿಮ ಕ್ಷಣದಲ್ಲಿ ಕೇಂದ್ರ ಸರ್ಕಾರವು, ಕರ್ನಾಟಕದ ಟ್ಯಾಬ್ಲೋಗೆ ಅವಕಾಶ ಕಲ್ಪಿಸಿದೆ. ಇದರೊಂದಿಗೆ 14ನೇ ಬಾರಿಗೆ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಟ್ಯಾಬ್ಲೋ ಪ್ರದರ್ಶನಕ್ಕೆ ಅವಕಾಶ ಸಿಕ್ಕಂತಾಗಿದೆ.

ಕರ್ನಾಟಕದ ನಾರಿಶಕ್ತಿ ಪರಿಕಲ್ಪನೆಯ ಟ್ಯಾಬ್ಲೋಗೆ ಕೇಂದ್ರ ಸರ್ಕಾರವು ತನ್ನ ಒಪ್ಪಿಗೆಯನ್ನು ನೀಡಿದೆ.

ಸುಮಾರು 13 ವರ್ಷಗಳಿಂದ ಕರ್ನಾಟಕವು ಪ್ರತಿನಿಧಿಸುತ್ತಿದ್ದರಿಂದ ಈ ಬಾರಿ ಕೈ ಬಿಡಲಾಗಿತ್ತು. ಆದರೆ, ಮೂರ್ನಾಲ್ಕು ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ, ಈ ವಿಷಯವು ರಾಜಕೀಯ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿತ್ತು.

ಪ್ರತಿಪಕ್ಷವು ಕಾಂಗ್ರೆಸ್ ಟ್ಯಾಬ್ಲೋ ವಿಷಯದಲ್ಲಿ ಬಿಜೆಪಿಯ ವಿರುದ್ಧ ತೀವ್ರ ವಾಗ್ದಾಳಿಯನ್ನು ಮಾಡಿತ್ತು.