Tuesday, 13th May 2025

ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.10ರಷ್ಟು ಮೀಸಲಾತಿ: ಸುಪ್ರೀಂ ಅಸ್ತು

ನವದೆಹಲಿ: ಮುಂದುವರೆದ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಕೇಂದ್ರೀಯ ಸಂಸ್ಥೆಗಳು ಮತ್ತು ಉದ್ಯೋಗದಲ್ಲಿ ಶೇ.10 ರಷ್ಟು ಮೀಸಲಾತಿ ಕಲ್ಪಿಸುವ ಸಂವಿಧಾನದ 103ನೇ ತಿದ್ದುಪಡಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿ ಹಿಡಿದಿದೆ.
ಸಾಮಾನ್ಯ ವರ್ಗಗಳಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ. 10 ರಷ್ಟು ಮೀಸಲಾತಿ ಒದಗಿಸುವ ಸಂವಿಧಾನದ 103ನೇ ತಿದ್ದುಪಡಿ ಮಾನ್ಯತೆಯನ್ನು ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರನ್ನೊಳಗೊಂಡ ಸಾಂವಿ ಧಾನಿಕ ಪೀಠ ಮೂರನೇ ಎರಡರಷ್ಟು ಬಹುಮತದೊಂದಿಗೆ ಎತ್ತಿ ಹಿಡಿದಿದೆ. ನಾಲ್ವರು ನ್ಯಾಯಾಧೀಶರು ಈ ಕಾಯ್ದೆ ಪರವಾಗಿ ವಾದಿಸಿದರೆ, ಮತ್ತೋರ್ವರು ವಿರುದ್ಧವಾಗಿ ವಾದಿಸಿದ್ದಾರೆ.
ತೀರ್ಪನ್ನು ಓದಿದ ನ್ಯಾಯಾಧೀಶ ಮಹೇಶ್ವರಿ, ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ. 10 ರಷ್ಟು ಮೀಸಲಾತಿ ಒದಗಿಸುವು ದರಿಂದ ಸಂವಿಧಾನದ ಮೂಲ ರಚನೆ ಉಲ್ಲಂಘಿಸುವುದಿಲ್ಲ ಎಂದರು.
ಆದಾಗ್ಯೂ, ನ್ಯಾಯಾಧೀಶರಾದ ಎಸ್.ರವೀಂದ್ರ ಭಟ್ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ. 10 ರಷ್ಟು ಮೀಸಲಾತಿಗೆ ವಿರೋಧ ವ್ಯಕ್ತಪಡಿಸಿದರು. ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ಬಡವರನ್ನು ಇದರಿಂದ ಹೊರಗಿಡು ವುದು ತಾರತಮ್ಯವಾಗುತ್ತದೆ ಎಂದು ಅಸಮ್ಮತಿ ವ್ಯಕ್ತಪಡಿಸಿದರು.