Thursday, 15th May 2025

ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ: ಬ್ರಿಜ್ ಭೂಷಣ್ ಶರಣ್ ಸಿಂಗ್

ವದೆಹಲಿ: ಲೈಂಗಿಕ ಕಿರುಕುಳದ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಭಾರತದ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು, ಯಾವುದೇ ಕಾರಣಕ್ಕೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಲೈಂಗಿಕ ಕಿರುಕುಳ ಆರೋಪ ಮಾಡಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿ ಪಟುಗಳಿಗೆ ರಾಜ ಕೀಯ, ಕ್ರೀಡಾವಲಯ ಸೇರಿದಂತೆ ಹಲವರಿಂದ ಬೆಂಬಲ ವ್ಯಕ್ತವಾಗುತ್ತಿರುವ ಸಂದರ್ಭ ದಲ್ಲೇ ತಮ್ಮ ಬೆಂಬಲಿಗರ ಶಕ್ತಿಪ್ರದರ್ಶನ ನಡೆಸಿದ ನಂತರ ಬ್ರಿಜ್ ಭೂಷಣ್ ಅವರು ಈ ಹೇಳಿಕೆ ನೀಡಿದ್ದಾರೆ.

ಪ್ರತಿಭಟನಾನಿರತ ಕುಸ್ತಿಪಟುಗಳ ಬೇಡಿಕೆಯಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವು ದು ನನಗೆ ದೊಡ್ಡ ವಿಷಯವಲ್ಲ, ಆದರೆ ನಾನು ಅದನ್ನು ಅಪರಾಧಿಯಾಗಿ ಮಾಡುವು ದಿಲ್ಲ. ನಾನು ಕ್ರಿಮಿನಲ್ ಅಲ್ಲ ಎಂದು ಅವರು ಹೇಳಿದರು.

ಹಲವಾರು ಮಹಿಳಾ ಕುಸ್ತಿಪಟುಗಳಿಂದ ತನ್ನ ವಿರುದ್ಧ ಲೈಂಗಿಕ ಕಿರುಕುಳದ ದೂರುಗಳ ನಂತರ ದೆಹಲಿ ಪೊಲೀಸರು ದಾಖಲಿಸಿದ ಪ್ರಥಮ ಮಾಹಿತಿ ವರದಿ ಪ್ರತಿಯನ್ನು ಇನ್ನೂ ಸ್ವೀಕರಿಸಿಲ್ಲ ಎಂದು ಹೇಳಿದರು.

ಎಫ್‍ಐಆರ್ ಪ್ರತಿ ಬಂದ ನಂತರ ನಾನು ಮಾತನಾಡುತ್ತೇನೆ ಎಂದು ಅವರು ಹೇಳಿದರು. ದೇಶದ ಅಗ್ರ ಕುಸ್ತಿಪಟುಗಳಿಂದ ತಮ್ಮ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳನ್ನು ಆಧರಿಸಿ ಪ್ರಕರಣ ದಾಖಲಿಸುವ ದೆಹಲಿ ಪೊಲೀಸರ ನಿರ್ಧಾರವನ್ನು ಅವರು ಸ್ವಾಗತಿಸಿದ್ದಾರೆ.