Monday, 12th May 2025

ರಾಹುಲ್ ಗಾಂಧಿಗೆ ಮೂರು ತಾಸು ’ಇಡಿ’ ವಿಚಾರಣೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾ ಲಯದ ಅಧಿಕಾರಿಗಳು ಸೋಮವಾರ ಸುಮಾರು ಮೂರು ತಾಸು ವಿಚಾರಣೆಗೆ ಒಳಪಡಿಸಿದರು.

ಊಟದ ವಿರಾಮದ ವೇಳೆ ಜಾರಿ ನಿರ್ದೇಶನಾಲಯ ಕಚೇರಿಯಿಂದ ತೆರಳಿರುವ ರಾಹುಲ್ ಗಾಂಧಿ, ಊಟದ ಬಳಿಕ ಮತ್ತೆ ವಿಚಾರಣೆ ಮುಂದುವರಿಯಲಿದೆ ಎಂದು ಮೂಲಗಳು ಹೇಳಿವೆ.

ಈ ಮಧ್ಯೆ, ಕೇಂದ್ರ ಸರ್ಕಾರವು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ದೆಹಲಿಯ ಜಾರಿ ನಿರ್ದೇಶನಾಲಯ ಕಚೇರಿ ಹೊರಗೆ ಪ್ರತಿಭಟನೆ ನಡೆಸಿದರು.

ಸಾರ್ವಜನಿಕರ ಹಿತಾಸಕ್ತಿಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ದನಿಯೆತ್ತುತ್ತಿರುವ ಕಾರಣ ರಾಹುಲ್ ಗಾಂಧಿ ಅವರು ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗುವಂತೆ ಮಾಡಲಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ.

ಕರ್ನಾಟಕ ಸೇರಿದಂತೆ ಹಲವೆಡೆ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.