Sunday, 11th May 2025

ಐವರು ಭಾರತೀಯ ವಿದ್ಯಾರ್ಥಿಗಳ ಸಾವು: ಎಸ್. ಜೈಶಂಕರ್ ಸಂತಾಪ

ನವದೆಹಲಿ: ಕೆನಡಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಗಳ ಸಾವಿಗೆ ಸಂತಾಪ ಸೂಚಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಗಾಯಗೊಂಡವರ ಚೇತರಿಕೆಗೆ ಪ್ರಾರ್ಥಿಸುತ್ತೇನೆ. ಭಾರತ ಸರ್ಕಾರವು ಎಲ್ಲಾ ಅಗತ್ಯ ಬೆಂಬಲ ಹಾಗೂ ಸಹಾಯವನ್ನು ಒದಗಿಸುತ್ತದೆ’ ಎಂದು ಟ್ವೀಟ್ ಮಾಡಿದ್ದಾರೆ.

ಕೆನಡಾದಲ್ಲಿರುವ ಭಾರತೀಯ ಹೈಕಮಿಷನರ್ ಅಜಯ್ ಬಿಸಾರಿಯಾ ಪ್ರಕಾರ, ಶನಿವಾರ ಟೊರಾಂಟೊ ಬಳಿ ಅಪಘಾತ ಸಂಭವಿಸಿದ್ದು, ಐವರು ಸಾವಿಗೀಡಾಗಿದ್ದಾರೆ. ಗಾಯ ಗೊಂಡಿರುವ ಇಬ್ಬರು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿದ್ಯಾರ್ಥಿಗಳ ಸಾವಿಗೆ ಸಂತಾಪ ಸೂಚಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್,’ಕೆನಡಾದಲ್ಲಿ ಐವರು ಭಾರತೀಯ ವಿದ್ಯಾರ್ಥಿಗಳ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ.