Monday, 12th May 2025

‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಬಳಿಕ ಕಾಶ್ಮೀರದಲ್ಲಿ ಗರಿಷ್ಠ ಸಾವು ಸಂಭವಿಸಿದೆ

ನವದೆಹಲಿ: ಶಿವಸೇನೆಯ ಹಿರಿಯ ಮುಖಂಡ ಸಂಜಯ್ ರಾವತ್, ದಿ ಕಾಶ್ಮೀರ್ ಫೈಲ್ಸ್ ಚಿತ್ರದ ನಂತರ ಕಾಶ್ಮೀರದಲ್ಲಿ ಗರಿಷ್ಠ ಸಂಖ್ಯೆಯ ಹತ್ಯೆಗಳು ಸಂಭವಿಸಿವೆ. ಕಾಶ್ಮೀರ ಪಂಡಿ ತರು, ಭದ್ರತಾ ಸಿಬ್ಬಂದಿಯನ್ನು ಹತ್ಯೆ ಮಾಡಲಾಗಿದೆ ಎಂದು ಹೇಳಿದರು.

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಅಶ್ಲೀಲ ಮತ್ತು ತಪ್ಪು ಪ್ರಚಾರದ ಉದ್ದೇಶ ಹೊಂದಿದೆ ಎಂದು 53ನೇ ಭಾರತೀಯ ಚಲನಚಿತ್ರೋತ್ಸವದ (ಐಎಫ್ಎಫ್‌ಐ) ತೀರ್ಪುಗಾರರ ಮುಖ್ಯಸ್ಥ, ಇಸ್ರೇಲಿ ಚಲನಚಿತ್ರ ನಿರ್ಮಾಪಕ ನಡವ್ ಲ್ಯಾಪಿಡ್ ಹೇಳಿಕೆ ಇದೀಗ ಪರ ಹಾಗೂ ವಿರೋಧದ ಚರ್ಚೆಗೆ ಕಾರಣವಾಗಿದೆ.