Sunday, 11th May 2025

ಪರಿಶಿಷ್ಟ ಜಾತಿ-ಪಂಗಡಗಳಲ್ಲಿ ಉಪ ವರ್ಗೀಕರಣ: ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್

ವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿ ಉಪ ವರ್ಗೀಕರಣಕ್ಕೆ ಅವಕಾಶವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಬಹುಮತದಿಂದ ತೀರ್ಪು ನೀಡಿದೆ.

ಮಹತ್ವದ ತೀರ್ಪಿನಲ್ಲಿ, ಏಳು ನ್ಯಾಯಾಧೀಶರ ಪೀಠವು – 6:1 ಬಹುಮತದಿಂದ- ಎಸ್ಸಿ / ಎಸ್ಟಿ ವರ್ಗಗಳಲ್ಲಿ ಹೆಚ್ಚು ಹಿಂದುಳಿದವರಿಗೆ ಪ್ರತ್ಯೇಕ ಕೋಟಾ ಗಳನ್ನು ನೀಡಲು ಉಪ ವರ್ಗೀಕರಣಕ್ಕೆ ಅವಕಾಶವಿದೆ ಎಂದು ಅಭಿಪ್ರಾಯಪಟ್ಟಿದೆ.

ಉದ್ಯೋಗ ಮತ್ತು ಪ್ರವೇಶದಲ್ಲಿ ಕೋಟಾಕ್ಕಾಗಿ ಎಸ್ಸಿ ಮತ್ತು ಎಸ್ಟಿ ವರ್ಗಗಳಲ್ಲಿ ಉಪ ವರ್ಗೀಕರಣ ಮಾಡಲು ರಾಜ್ಯಗಳಿಗೆ ಅಧಿಕಾರವಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಸುಪ್ರೀಂ ಕೋರ್ಟ್ನ 7 ನ್ಯಾಯಾಧೀಶರ ಪೀಠವು 6:1 ಬಹುಮತದಿಂದ, ಮೀಸಲಾತಿ ವರ್ಗಗಳ ಅಂದರೆ ಪರಿಶಿಷ್ಟ ಜಾತಿಗಳು / ಪರಿಶಿಷ್ಟ ಪಂಗಡಗಳ ಉಪ ವರ್ಗೀಕರಣಕ್ಕೆ ಅನುಮತಿಸಲಾಗಿದೆ ಎಂದು ಅಭಿಪ್ರಾಯಪಟ್ಟಿದೆ.

Leave a Reply

Your email address will not be published. Required fields are marked *