Monday, 12th May 2025

ಕೊಚ್ಚಿಯಲ್ಲಿ ಎಸ್‌ಡಿಪಿಐ ಮುಖಂಡನ ಬರ್ಬರ ಹತ್ಯೆ: ಆರ್‌ಎಸ್‌ಎಸ್‌ ಕೈವಾಡ ಆರೋಪ

#SDPI

ಕೊಚ್ಚಿ: ಶನಿವಾರ ರಾತ್ರಿ ಕೇರಳದ ಕೊಚ್ಚಿಯಲ್ಲಿ ಅಪರಿಚಿತ ಗ್ಯಾಂಗ್‌ನಿಂದ ಹಲ್ಲೆಗೊಳಗಾದ ಕೇರಳದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಕೆ.ಎಸ್.ಶಾನ್ ಭಾನುವಾರ ಮೃತಪಟ್ಟಿದ್ದಾರೆ.

ರಾತ್ರಿ ಅವರು ಮನೆಗೆ ಹಿಂದಿರುಗುತ್ತಿದ್ದಾಗ ಅವರ ಬೈಕ್‌ ಗೆ ಕಾರ್ ಡಿಕ್ಕಿ ಹೊಡೆದಿದೆ. ನೆಲಕ್ಕೆ ಬಿದ್ದ ಅವರ ಮೇಲೆ ದುಷ್ಕರ್ಮಿಗಳ ಗುಂಪು ದಾಳಿ ಮಾಡಿದೆ. ಕೆ.ಎಸ್. ಶಾನ್ ಅವರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

ಕೆ.ಎಸ್. ಶಾನ್ ಅವರನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದವರೇ ಹತ್ಯೆ ಮಾಡಿದ್ದಾರೆ ಎಂದು ಎಸ್‌ಡಿಪಿಐ ಅಧ್ಯಕ್ಷ ಎಂ.ಕೆ.ಫೈಝಿ ಆರೋಪಿಸಿದ್ದಾರೆ.