Sunday, 11th May 2025

Shaktikanta Das: RBI ಗವರ್ನರ್ ಶಕ್ತಿಕಾಂತ್‌ ದಾಸ್ ಆಸ್ಪತ್ರೆಗೆ ದಾಖಲು

Saktikanth das

ಚೆನ್ನೈ: ಭಾರತೀಯ ರಿಸರ್ವ್ ಬ್ಯಾಂಕ್ (RBI) ಗವರ್ನರ್(RBI Governor) ಶಕ್ತಿಕಾಂತ್‌ ದಾಸ್(Shaktikanta Das) ಅವರು ಅನಾರೋಗ್ಯದ ಹಿನ್ನೆಲೆ ಮಂಗಳವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಅಸಿಡಿಟಿ ಸಮಸ್ಯೆ ಕಾಣಿಸಿಕೊಂಡಿದ್ದು, ತಮಿಳುನಾಡು ರಾಜಧಾನಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆರ್‌ಬಿಐ ತಿಳಿಸಿದೆ.

ಇನ್ನು ಈ ಬಗ್ಗೆ ಆರ್‌ಬಿಐ ವಕ್ತಾರರು ಪ್ರತಿಕ್ರಿಯಿಸಿದ್ದು, ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ತೀವ್ರವಾದ ಆಸಿಡಿಟಿ ಸಮಸ್ಯೆ ಅನುಭವಿಸಿದ್ದರು. ಅಬ್ಸರ್ವೇಷನ್‌ಗಾಗಿ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರು ಈಗ ಆರೋಗ್ಯವಾಗಿದ್ದಾರೆ ಮತ್ತು ಮುಂದಿನ 2-3 ಗಂಟೆಗಳಲ್ಲಿ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಆರ್‌ಬಿಐ ಹೇಳಿಕೆಯಲ್ಲಿ ತಿಳಿಸಿದೆ. ಆತಂಕಕ್ಕೆ ಯಾವುದೇ ಕಾರಣವಿಲ್ಲ ಎಂದು ತಿಳಿಸಿದ್ದಾರೆ

ಶಕ್ತಿಕಾಂತ ದಾಸ್ ಅವರು 2018 ರಲ್ಲಿ ಆರ್‌ಬಿಐ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡಿದ್ದರು. ಆ ಬಳಿಕ ಕಳೆದ 6 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಉತ್ತಮ ನಿರ್ವಹಣೆ ಹಿನ್ನೆಲೆ ಹಲವು ಅಂತಾರಾಷ್ಟ್ರೀಯ ಪ್ರಶಸ್ತಿಗಳು ಇವರಿಗೆ ಲಭಿಸಿದ್ದವು. ಡಿಸೆಂಬರ್ 2018 ರಲ್ಲಿ ನೇಮಕಗೊಂಡ ದಾಸ್, ಸರ್ಕಾರ ಮತ್ತು ಆರ್‌ಬಿಐ ನಡುವಿನ ಸಂಬಂಧ ಹದಗೆಟ್ಟ ಸಂದರ್ಭದಲ್ಲಿ ಶಕ್ತಿಕಾಂತ್‌ ದಾಸ್‌ ಅಧಿಕಾರ ಸ್ವೀಕರಿಸಿದ್ದರು. ಅಂದಿನಿಂದ ಅವರು ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದಲ್ಲಿ ವಿಶ್ವಾಸಾರ್ಹ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ಅವರ ಪ್ರಸ್ತುತ ಅವಧಿಯು ಡಿಸೆಂಬರ್ 10 ರಂದು ಕೊನೆಗೊಳ್ಳುತ್ತದೆ, ಆದರೆ ಅವರ ನಾಯಕತ್ವವು ಕನಿಷ್ಠ ಇನ್ನೊಂದು ವರ್ಷ ಮುಂದುವರಿಯುವ ನಿರೀಕ್ಷೆಯಿದೆ ಎಂದು ಒಳಗಿನವರು ಹೇಳುತ್ತಾರೆ, ರಾಯಿಟರ್ಸ್ ವರದಿ ಸೇರಿಸಲಾಗಿದೆ.

ಈ ಸುದ್ದಿಯನ್ನೂ ಓದಿ: Narendra Modi: ಪ್ರಧಾನಿ ಮೋದಿಗೆ ನೈಜೀರಿಯಾದ 2ನೇ ಅತ್ಯುನ್ನತ ನಾಗರಿಕ ಗೌರವ ಪ್ರದಾನ