Thursday, 15th May 2025

ದೀಪಾವಳಿ ರಜೆಗಾಗಿ ಯೋಧರ ಕಿತ್ತಾಟ, ಶೂಟೌಟ್‌: ನಾಲ್ವರ ಸಾವು

ಛತ್ತೀಸ್ಗಢ: ತೆಲಂಗಾಣ-ಛತ್ತೀಸ್‌ಗಢ ಗಡಿ ಭಾಗದಲ್ಲಿ ದೀಪಾವಳಿ ರಜೆ ವಿಚಾರವಾಗಿ ಇಬ್ಬರು ಯೋಧರ ನಡುವೆ ಕಿತ್ತಾಟ ನಡೆದು  ಹಾಗೂ ಬಳಿಕ ಸಂಭವಿಸಿದ ಗುಂಡಿನ ಚಕಮಕಿಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯ ಲಿಂಗಂಪಲ್ಲಿ ಬೇಸ್ ಕ್ಯಾಂಪ್‌ನಲ್ಲಿ ದೀಪಾವಳಿ ರಜೆ ವಿಚಾರವಾಗಿ ಯೋಧರ ನಡುವೆ ಮಾತಿನ ಚಕಮಕಿ ನಡೆದಿದೆ. ಇಬ್ಬರೂ ಹೊಡೆದಾಡಿಕೊಂಡಿದ್ದಾರೆ. ಜಗಳ ತಾರಕ್ಕೇರಿದ್ದು, ಪರಸ್ಪರ ಗನ್‌ಗಳಿಂದ ಗುಂಡು ಹಾರಿಸಿಕೊಂಡು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಬಿಹಾರದ ರಾಜಮಣಿ ಯಾದವ್, ದಾಂಜಿ ಮತ್ತು ಬಂಗಾಳದ ರಾಜುಮಂಡಲ್ ಎಂಬವರು ಮೃತ ಸೈನಿಕರು. ಮೂವರು ಗಾಯಗೊಂಡಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಧರ್ಮೇಂದರ್ ಎಂಬ ಯೋಧ ಮೃತಪಟ್ಟಿದ್ದಾ ರೆಂದು ತಿಳಿದುಬಂದಿದೆ. ಚಿಕಿತ್ಸೆ ಪಡೆಯು ತ್ತಿರುವ ಇತರೆ ಯೋಧರ ಸ್ಥಿತಿ ಕೂಡ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *