Tuesday, 13th May 2025

ಭಾರಿ ಅಗ್ನಿ ಅವಘಡ: 150 ಅಂಗಡಿಗಳು ಸುಟ್ಟು ಭಸ್ಮ

ಗುವಾಹಟಿ : ಅಸ್ಸಾಂನ ಜೋರ್ಹತ್ ಜಿಲ್ಲೆಯ ಮಾರುಕಟ್ಟೆಯೊಂದರಲ್ಲಿ ಗುರುವಾರ ತಡರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 150 ಅಂಗಡಿಗಳು ಸುಟ್ಟು ಭಸ್ಮವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೋರ್ಹತ್ ಪಟ್ಟಣದ ಹೃದಯಭಾಗದಲ್ಲಿರುವ ಚೌಕ್ ಬಜಾರ್‌ನಲ್ಲಿ 25 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸಲು ಯತ್ನಿಸುತ್ತಿದ್ದು, ಬೆಂಕಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ ಎಂದು ಅವರು ಹೇಳಿದ್ದಾರೆ.

ಅಂಗಡಿಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾ ಗಿದೆ. ದಟ್ಟಣೆಯ ಮಾರುಕಟ್ಟೆಯಲ್ಲಿ ಬಹು ಬೇಗ ಬೆಂಕಿ ವ್ಯಾಪಿಸಿದೆ.

ಎಲ್ಲ ಅಂಗಡಿಗಳು ಬಾಗಿಲ ಮುಚ್ಚಿ, ಸಿಬ್ಬಂದಿ ಮನೆಗೆ ತೆರಳಿದ್ದರಿಂದ ಯಾವುದೇ ಸಾವು ಸಂಭವಿಸಿಲ್ಲ. ಅಗ್ನಿಗೆ ಆಹುತಿಯಾದ ಬಹುತೇಕ ಅಂಗಡಿಗಳು ದಿನಸಿ ಮತ್ತು ಬಟ್ಟೆ ಅಂಗಡಿಗಳಾಗಿವೆ.