Wednesday, 14th May 2025

ಅಬಕಾರಿ ನೀತಿ ಪ್ರಕರಣ: ಸಿಸೋಡಿಯಾಗೆ 7 ದಿನ ಇಡಿ ವಶ

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ದೆಹಲಿ ನ್ಯಾಯಾಲಯ 7 ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿದೆ.
ಪ್ರಕರಣದಲ್ಲಿ ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಎಎಪಿ ನಾಯಕ ಮಾಜಿ ಉಪಮುಖ್ಯಮಂತ್ರಿ ಸಿಸೋಡಿಯಾ ಅವರನ್ನು ಮಾ.17 ರವರೆಗೆ ಇಡಿ ವಶಕ್ಕೆ ನೀಡಿದೆ.
ನ್ಯಾಯಾಂಗ ವಶದ ಅವಧಿ ಪೂರ್ಣಗೊಂಡ ಹಿನ್ನಲೆಯಲ್ಲಿ ಸಿಸೋಡಿಯಾ ಅವರನ್ನು ತಿಹಾರ್ ಜೈಲಿನಲ್ಲಿ ರೂಸ್ ಅವೆನ್ಯೂ ಕೋರ್ಟ್ ಗೆ ಮಧ್ಯಾಹ್ನ 2 ಗಂಟೆಗೆ ಹಾಜರುಪಡಿಸಲಾಯಿತು.