Monday, 12th May 2025

ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ವದೆಹಲಿ: ಉಸಿರಾಟದ ಸೋಂಕಿನ ಚಿಕಿತ್ಸೆಗಾಗಿ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖ ಲಾಗಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸರ್ ಗಂಗಾ ರಾಮ್ ಆಸ್ಪತ್ರೆಯ ಅಧ್ಯಕ್ಷ ಡಾ.ಅಜಯ್ ಸ್ವರೂಪ್, ಸೋನಿಯಾ ಗಾಂಧಿ ಅವರು ಜನವರಿ 10ರಂದು ಮಧ್ಯಾಹ್ನ 3 ಗಂಟೆಗೆ ಸ್ಥಿರ ಮತ್ತು ತೃಪ್ತಿಕರ ಸ್ಥಿತಿಯಲ್ಲಿ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ ಎಂದು ಹೇಳಿದರು.

ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ ಸೋನಿಯಾ ಗಾಂಧಿ ಅವರನ್ನು ಜನವರಿ 4 ರಂದು ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಡಿಸೆಂಬರ್‌ 24ರಂದು ಭಾರತ್‌ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಸೋನಿಯಾ ಅವರು ಆಸ್ಪತ್ರೆಗೆ ದಾಖಲಾದಾಗ ಉತ್ತರ ಪ್ರದೇಶ ಕಾಂಗ್ರೆಸ್‌ನ ಉಸ್ತುವಾರಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ‘ಭಾರತ್ ಜೋಡೋ ಯಾತ್ರೆ’ಗೆ ತಾಯಿ ಸೋನಿಯಾ ಗಾಂಧಿ ಅವರ ಅನಾರೋಗ್ಯದ ಕಾರಣ ಹಾಜರಾಗಿರಲಿಲ್ಲ.
Read E-Paper click here