Tuesday, 13th May 2025

ಜಗನ್ ಮೋಹನ್ ರೆಡ್ಡಿ ವಿರುದ್ಧ 11 ಸುಮೊಟು ಪ್ರಕರಣ ದಾಖಲು

ವಿಜಯವಾಡ: ಆಂಧ್ರ ಪ್ರದೇಶ ಹೈಕೋರ್ಟ್ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ವಿರುದ್ಧ 11 ಸುಮೊಟು ಪ್ರಕರಣ ದಾಖಲಿಸಿದೆ.

ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರು ವಿರೋಧ ಪಕ್ಷದಲ್ಲಿದ್ದಾಗ ನ್ಯಾಯಾಲಯದ ಬಗ್ಗೆ ಮಾಡಿದ್ದ ಕಮೆಂಟ್ಸ್ ಗಳನ್ನು ಆಧರಿಸಿ ಕೆಳ ನ್ಯಾಯಾಲಯ ಪ್ರಕರಣ ದಾಖಲಿಸಿದೆ. ಹೈಕೋರ್ಟ್ ಆಡಳಿತಾತ್ಮಕ ಸಮಿತಿ ಶಿಫಾರಸ್ಸಿನಂತೆ ಸುಮೊಟು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

2016 ರಲ್ಲಿ ಜಗನ್ ಮೋಹನ್ ರೆಡ್ಡಿ ವಿಪಕ್ಷದಲ್ಲಿದ್ದಾಗ ಅಂದು ಮುಖ್ಯಮಂತ್ರಿಯಾಗಿದ್ದ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರ ವಿರುದ್ಧ ಅಮರಾವತಿ ಭೂಮಿ ಅಕ್ರಮದ ಆರೋಪ ಮಾಡಿದ್ದರು.

ಈ ಸಂಬಂಧ ಅನಂತಪುರ ಮತ್ತು ಗುಂಟೂರು ಜಿಲ್ಲೆಯಲ್ಲಿ ಕೆಲವು ಪ್ರಕರಣಗಳು ದಾಖಲಾಗಿದ್ದವು. ಇದನ್ನು ಪರಿಶೀಲಿಸಿದ ಪೊಲೀಸರು, ಕ್ರಿಯಾಶೀಲ ಸಾಕ್ಷ್ಯಗಳ ಅನುಪಸ್ಥಿತಿಯಲ್ಲಿ ಅಂತಿಮ ವರದಿಗಳನ್ನು ಸಲ್ಲಿಸಿದ್ದಾರೆ.

 

Leave a Reply

Your email address will not be published. Required fields are marked *