Tuesday, 13th May 2025

ಅಕ್ಟೋಬರ್‌ 1ರಂದು ದೇಶಾದ್ಯಂತ ಸ್ವಚ್ಛತಾ ಅಭಿಯಾನ

ನವದೆಹಲಿ: ಅಕ್ಟೋಬರ್‌ 1ರಂದು ದೇಶಾದ್ಯಂತ ಸ್ವಚ್ಛತಾ ಅಭಿಯಾನ ಕೈಗೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಅಕ್ಟೋಬರ್‌ 1ರಂದು ಒಂದು ಗಂಟೆ ಸ್ವಚ್ಛತಾ ಕಾರ್ಯದಲ್ಲಿ ತೊಡಗುವ ಮೂಲಕ ಮಹಾತ್ಮ ಗಾಂಧೀಜಿ ಅವರಿಗೆ ಗೌರವ ಸಲ್ಲಿಸೋಣ ಎಂದು ಮನ್‌ ಕಿ ಬಾತ್‌ ರೇಡಿಯೊ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಕರೆ ನೀಡಿ ನೀಡಿದ್ದಾರೆ.

ಸ್ವಚ್ಛತಾ ಅಭಿಯಾನದ ಕುರಿತು ಕೇಂದ್ರ ವಸತಿ ಹಾಗೂ ನಗರಾಭಿವೃದ್ಧಿ ಸಚಿವಾಲಯವು ಅಭಿಯಾನದ ಕುರಿತು ಮಾಹಿತಿ ನೀಡಿದೆ. ‘ಏಕ್‌ ತಾರೀಖ್‌, ಏಕ್‌ ಘಂಟಾ, ಏಕ್‌ ಸಾಥ್’ ಎಂಬುದು ಅಭಿಯಾನದ ಹೆಸರಾಗಿದೆ.

‘ಸಾರ್ವಜನಿಕ ಸ್ಥಳಗಳಾದ ಮಾರುಕಟ್ಟೆ, ರೈಲ್ವೆ ಹಳಿ, ಪ್ರವಾಸಿ ತಾಣಗಳು, ಧಾರ್ಮಿಕ ಸ್ಥಳಗಳು ಸೇರಿ ಹಲವೆಡೆ ಅಕ್ಟೋಬರ್‌ 1ರಂದು ಸ್ವಚ್ಛತಾ ಅಭಿಯಾನ ಕೈಗೊಳ್ಳಲಾಗುತ್ತಿದೆ. ದೇಶದ ನಾಗರಿಕರು ಸ್ವಯಂಪ್ರೇರಿತರಾಗಿ ಅಭಿಯಾನದಲ್ಲಿ ಪಾಲ್ಗೊಳ್ಳಿ’ ಎಂದು ಸಚಿವಾಲ ಯದ ಪ್ರಕಟಣೆ ತಿಳಿಸಿದೆ.

ಸಾರ್ವಜನಿಕರು https://swachhatahiseva.com/ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು 2014ರಲ್ಲಿ ಗಾಂಧಿ ಜಯಂತಿಯಂದೇ ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡಿದ್ದರು.

Leave a Reply

Your email address will not be published. Required fields are marked *