Wednesday, 14th May 2025

ಚುನಾವಣಾ ಆಯುಕ್ತರಾಗಿ ಅರುಣ್ ಗೋಯಲ್ ಅಧಿಕಾರ ಸ್ವೀಕಾರ

ವದೆಹಲಿ: ಚುನಾವಣಾ ಆಯುಕ್ತರಾಗಿ ನೂತನವಾಗಿ ನೇಮಕಗೊಂಡಿದ್ದ ನಿವೃತ್ತ ಐಎಎಸ್ ಅಧಿಕಾರಿ ಅರುಣ್ ಗೋಯಲ್ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ.

ಪಂಜಾಬ್ ಕೇಡರ್ ಮತ್ತು 1985ನೇ ಬ್ಯಾಚ್ ನ ಗೋಯಲ್ ಅವರನ್ನು ಶನಿವಾರ ಕೇಂದ್ರ ಸರ್ಕಾರ ನೂತನ ಆಯುಕ್ತರನ್ನಾಗಿ ನೇಮಕ ಮಾಡಿ ಅಧಿಕೃತ ಪ್ರಕಟಣೆ ಹೊರಡಿಸಿತ್ತು. ರಾಷ್ಟ್ರಪತಿ ಮುರ್ಮು ಅವರು ಅರುಣ್ ಗೋಯಲ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದರು.

ಪ್ರಸ್ತುತ ಆಯೋಗದಲ್ಲಿ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತ ಅನುಪ್ ಚಂದ್ರ ಪಾಂಡೆ ಇದ್ದಿದ್ದು, ಅವರೊಂದಿಗೆ ಗೋಯಲ್ ಆಯುಕ್ತರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ವರದಿ ತಿಳಿಸಿದೆ.