Sunday, 11th May 2025

ತೆಲಂಗಾಣದಲ್ಲಿ ಜ.8-16 ರವರೆಗೆ ಶಾಲೆಗಳಿಗೆ ರಜೆ

ಹೈದರಾಬಾದ್‌: ಕೋವಿಡ್‌ ಪ್ರಕರಣ ಏರುತ್ತಿರುವ ಹಿನ್ನೆಲೆಯಲ್ಲಿ ತೆಲಂಗಾಣದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜನವರಿ 8 ರಿಂದ 16 ರವರೆಗೆ ರಜೆ ಘೋಷಿಸಲಾಗಿದೆ.

ತೆಲಂಗಾಣದಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ಕುರಿತು ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕೋವಿಡ್‌ ಎದುರಿಸಲು ಬೆಡ್‌, ಆಕ್ಸಿಜನ್‌ ಬೆಡ್‌, ಔಷಧಿಗಳು ಮತ್ತು ಪರೀಕ್ಷಾ ಕಿಟ್‌ಗಳನ್ನು ಖರೀದಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಸಾಮಾನ್ಯ ಜನರಿಗೆ ವೈದ್ಯಕೀಯ ಸೇವೆಗಳನ್ನು ಒದಗಿಸಲು ರಾಜ್ಯದಾದ್ಯಂತ ಹೆಚ್ಚಿನ ವಸತಿ ಪ್ರದೇಶ ಗಳಲ್ಲಿ ಕ್ಲಿನಿಕ್‌ಗಳನ್ನು ಸ್ಥಾಪಿಸಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ ಎಂದು ಸರ್ಕಾರದ ಪ್ರಕಟಣೆಯಲ್ಲಿ ಹೇಳಲಾಗಿದೆ.

ಕೇಂದ್ರದ ಮಾರ್ಗಸೂಚಿಗಳ ಪ್ರಕಾರ ಸದ್ಯಕ್ಕೆ ಲಾಕ್‌ಡೌನ್ ಅಗತ್ಯವಿಲ್ಲ ಎಂದು ಸಭೆಯಲ್ಲಿ ಆರೋಗ್ಯ ಅಧಿಕಾರಿಗಳು ಅವರಿಗೆ ತಿಳಿಸಿದರು.