Sunday, 11th May 2025

Terrorist Encounter: ಕಾಶ್ಮೀರದಲ್ಲಿ ಉಗ್ರನನ್ನು ಹೊಡೆದುರುಳಿಸಿದ ಸೇನೆ

encounter

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ(Jammu-Kashmir)ದಲ್ಲಿ ಬೆಳ್ಳಂಬೆಳಗ್ಗೆ ಸೇನಾ ಕಾರ್ಯಾಚರಣೆಯಲ್ಲಿ ಒಬ್ಬ ಉಗ್ರನನ್ನು ಎನ್‌ಕೌಂಟರ್‌(Terrorist Encounter) ಮಾಡಲಾಗಿದೆ. ಶ್ರೀನಗರದ ಹರ್ವಾನ್‌ ಪ್ರದೇಶದಲ್ಲಿ ಸೋಮವಾರ ತಡರಾತ್ರಿಯಿಂದಲೇ ಪ್ರಾರಂಭವಾಗಿದ್ದ ಕಾರ್ಯಾಚರಣೆಯಲ್ಲಿ ಇನ್ನೂ ಮೂವರು ಉಗ್ರರು ಸಿಕ್ಕಿಬಿದ್ದಿರುವ ಶಂಕೆ ವ್ಯಕ್ತವಾಗಿದೆ.

ಹರ್ವಾನ್‌ನ ಮೇಲಿನ ಪರ್ವತ ಪ್ರದೇಶದಲ್ಲಿ ಉಗ್ರರು ಅವಿತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಜಂಟೀ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು. ಈ ವೇಳೆ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿತ್ತು. ಈ ವೇಳೆ ಸೇನೆಯ ಗುಂಡೇಟಿಗೆ ಒಬ್ಬ ಉಗ್ರ ಹತನಾಗಿದ್ದಾನೆ. ಘಟನೆ ಬಗ್ಗೆ ಅಧಿಕಾರಿಗಳು ಪ್ರತಿಕ್ರಿಯಿಸಿದ್ದು, ಈ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿ ನಂತರ ಭದ್ರತಾ ಪಡೆಗಳು ಪ್ರಾರಂಭಿಸಿದ CASO (ಕಾರ್ಡನ್ ಮತ್ತು ಸರ್ಚ್ ಆಪರೇಷನ್) ಸಮಯದಲ್ಲಿ ಈ ಗುಂಡಿನ ಚಕಮಕಿ ಪ್ರಾರಂಭವಾದವು. ಭಯೋತ್ಪಾದಕರು ಅಡಗಿರುವ ಪ್ರದೇಶಗಳ ಸುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಮಂಗಳವಾರ ಮುಂಜಾನೆ ಕಾರ್ಯಾಚರಣೆಯನ್ನು ಪುನರಾರಂಭಿಸಿದೆ ಎಂದು ಹೇಳಿದ್ದಾರೆ.

ನವೆಂಬರ್ 28 ರಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (PoK) ಮತ್ತು ಪಾಕಿಸ್ತಾನದಿಂದ ಕಿಶ್ತ್ವಾರ್ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಏಳು ಮಂದಿ ಭಯೋತ್ಪಾದಕರ ಆಸ್ತಿಗಳನ್ನು ಜಪ್ತಿ ಮಾಡಿದರು. ಪಿಒಕೆ ಮತ್ತು ಪಾಕಿಸ್ತಾನದಿಂದ ಕಾರ್ಯನಿರ್ವಹಿಸುತ್ತಿರುವ ಕಿಶ್ತ್ವಾರ್‌ನ 36 ಭಯೋತ್ಪಾದಕರು ಪರಾರಿಯಾಗಿದ್ದಾರೆ. ಈ ಸಂಬಂಧ ತನಿಖಾ ವರದಿಯನ್ನು ದೋಡಾದ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ತಲೆಮರೆಸಿಕೊಂಡಿರುವ 36 ಭಯೋತ್ಪಾದಕರ ಪೈಕಿ ಏಳು ಮಂದಿ ತಮ್ಮ ಆಸ್ತಿಯನ್ನು ಕಾನೂನು ಪ್ರಕ್ರಿಯೆಗಳ ಭಾಗವಾಗಿ ಜಪ್ತಿಗೊಳಿಸಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಕಿಶ್ತ್ವಾರ್ ಜಾವೈದ್ ಇಕ್ಬಾಲ್ ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: Terror Attack: ಜಮ್ಮು & ಕಾಶ್ಮೀರದಲ್ಲಿ ಸೇನಾ ವಾಹನದ ಮೇಲೆ ಉಗ್ರರ ದಾಳಿ; 4 ಮಂದಿ ಬಲಿ